newsics.com
ಹಾಸನ: ಜಿಲ್ಲೆಯ ಪಶ್ಚಿಮಘಟ್ಟದ ಭಾಗದಲ್ಲಿ ಭಾರೀ ಮಳೆಯಿಂದಾಗಿ ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಸಕಲೇಶಪುರ ತಾಲೂಕಿನ ಎಡಕುಮಾರಿ ಬಳಿ ಹಳಿ ಮೇಲೆ ಮಣ್ಣು ಹಾಗೂ ಗಿಡಗಳು ಬಿದ್ದ ಪರಿಣಾಮ, ಬೆಂಗಳೂರು–ಮಂಗಳೂರು ರೈಲು ಮಾರ್ಗದಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಮಂಗಳೂರು–ಬೆಂಗಳೂರು ರೈಲ್ವೆ ಮಾರ್ಗದ 63/00ರಿಂದ 70/600ರ ನಡುವೆ ಸುಮಾರು ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಹಳಿ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ.
ಘಟನೆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಲ್ಲಾ ಪ್ರಯಾಣಿಕ ಮತ್ತು ಸರಕು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ, ಹಳಿ ಮೇಲೆ ಬಿದ್ದ ಮಣ್ಣು, ಮರ ಗಿಡ ತೆರವುಗೊಳಿಸಿ ಸಂಚಾರ ಪುನಃ ಪ್ರಾರಂಭಿಸಲು ಶ್ರಮಿಸುತ್ತಿದ್ದಾರೆ.
ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾದ್ದರಿಂದ ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ಇದರಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಟ್ರಾಫಿಕ್ ಜಾಮ್ ನಿವಾರಿಸಲು ಪೊಲೀಸರು ಹರಸಾಹಸಪಡುತ್ತಿದ್ದು, ಸಕಲೇಶಪುರ-ಮಂಗಳೂರು ಮಾರ್ಗದ ವಾಹನಗಳನ್ನು ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.
Cloudburst in Kashmir ಕಾಶ್ಮೀರದಲ್ಲಿ ಮೇಘ ಸ್ಫೋಟ: 7 ಮಂದಿ ಸಾವು, ಸಂಪರ್ಕ ಕಡಿದುಕೊಂಡ ಜೋಡ್ ಗ್ರಾಮ