newsics.com
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು,ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚಿನ ಮಳೆ ಹಿನ್ನಲೆ ನದಿಗಳು ಉಕ್ಕಿಹರಿಯುತ್ತಿದ್ದು, ನದಿಪಾತ್ರದ ಜನರು ಜಾಗರೂಕತೆಯಿಂದ ಇರಲು ಸೂಚನೆ ನೀಡಿದೆ.
ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಗದಗ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಬಾಗಲಕೋಟೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಆಗಸ್ಟ್ 21ರ ವರೆಗೆ ಹಗುರ ಮಳೆಯ ಮುನ್ಸೂಚನೆ ನೀಡಿದೆ.