newsics.com
ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಜೊತೆಗೆ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನ ರಣಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಹಲವು ಭಾಗಗಳಲ್ಲಿ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 21ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರಿಂದ 19ರಂದು ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 20ರವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.