newsics.com
ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದ್ದಾರೆ. ಕೆಲ ಜಿಲ್ಲೆಗಳಿಗಂತೂ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಈ ಪರಿಣಾಮ ನಾಳೆ (ಆಗಸ್ಟ್ 20) ಸಹ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
.ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಈಗಾಗಲೇ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನಾಳೆ ಅಂದರೆ ಆಗಸ್ಟ್ 20ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 20ರವರೆಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ. ಕೆಲವು ಸ್ಥಳಗಳಲ್ಲಿ 100 ಮಿಮೀಗಿಂತಲೂ ಹೆಚ್ಚಿನ ಮಳೆ ದಾಖಲಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಇದು ತೀವ್ರ ಮಳೆ ಮತ್ತು ಸಂಭಾವ್ಯ ಪ್ರವಾಹದ ಅಪಾಯವನ್ನು ಸೂಚಿಸುತ್ತದೆ.
https://www.newsics.com/2025/08/19/money-based-gaming-transactions-banned-under-online-gaming-bill/