Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌
ಕರ್ನಾಟಕಪ್ರಮುಖ

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Share
2 Min Read
SHARE

newsics.com

ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸರ್ಕಾರದ ಈ ನಿರ್ಧಾರದಿಂದ ಕಳೆದ ಐದು ದಶಕದ ಕನಸು ನನಸಾಗಿದೆ. ಸದ್ಯದ ಮಾಹಿತಿ ಪ್ರಕಾರ, ಐದು ಗುಂಪುಗಳ ಬದಲಾಗಿ ಮೂರು ವರ್ಗವನ್ನು ಮಾಡುವುದಕ್ಕೆ ಸಚಿವ ಸಂಪುಟ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರವನ್ನು ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ದಶಕಗಳಿಂದಲೂ ರಾಜಕೀಯವಾಗಿ ಬಿಸಿತುಪ್ಪವಾಗಿ ಪರಿಣಮಿಸಿದ್ದ ಒಳ ಮೀಸಲಾತಿ ವಿವಾದಕ್ಕೆ ರಾಜ್ಯ ಸರ್ಕಾರ ಕೊನೆಗೂ ಪರಿಹಾರ ಸೂಚಿಸಿದೆ.

ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರದ ಪ್ರಕಾರ, ಪರಿಶಿಷ್ಟ ಜಾತಿಯಲ್ಲಿರುವ ಎಡಗೈ ಮತ್ತು ಬಲಗೈ ಎರಡೂ ಸಮುದಾಯಗಳಿಗೆ ತಲಾ 6% ಮೀಸಲಾತಿ ನೀಡಲು ತೀರ್ಮಾನಿಸಿದೆ.

ಈ ನಿರ್ಧಾರವನ್ನು ಬುಧವಾರ(ಆ.20) ವಿಧಾನಸಭೆ ಅಧಿವೇಶನದಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿಯು ಎಡಗೈ ಸಮುದಾಯಕ್ಕೆ 6% ಮತ್ತು ಬಲಗೈ ಸಮುದಾಯಕ್ಕೆ 5% ಮೀಸಲಾತಿ ನೀಡಲು ಶಿಫಾರಸು ಮಾಡಿತ್ತು. ಈ ಅಸಮ ಪ್ರಮಾಣವು ಬಲಗೈ ಸಮುದಾಯದ ತೀವ್ರ ಆಕ್ಷೇಪಣೆಗೆ ಕಾರಣವಾಗಿತ್ತು. ಆದರೆ, ಹೊಸ ತೀರ್ಮಾನದಂತೆ, 18 ಜಾತಿಗಳನ್ನು ಒಳಗೊಂಡಿರುವ ಎಡಗೈ ಸಮುದಾಯ ಮತ್ತು 20 ಜಾತಿಗಳನ್ನು ಒಳಗೊಂಡಿರುವ ಬಲಗೈ ಸಮುದಾಯಕ್ಕೆ ಸಮಾನ ಮೀಸಲಾತಿ ದೊರೆಯಲಿದೆ. ಉಳಿದಂತೆ, 63 ಜಾತಿಗಳಿಗೆ (ಬೋವಿ, ಲಂಬಾಣಿ ಕೊರಮ ಕೊರಚ) 5% ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ.

ಯಾವ ಜಾತಿ ಯಾವ ಸಮುದಾಯಕ್ಕೆ?

ದಲಿತ ಎಡಗೈ ಜಾತಿಗಳು:

ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್

ದಲಿತ ಬಲಗೈ ಜಾತಿಗಳು

ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.

5% ಮೀಸಲಾತಿ ಒಳಪಡುವ ಜಾತಿಗಳು

ಬಕುಡ, ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ; ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ; ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್; ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ; ತಿರ್ಗರ್, ತಿರ್ಬಂದ.

ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ

ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ

TAGGED:State Govt Green Signal for implementation of Scheduled Caste Internal Reserve
Share This Article
Facebook Twitter Copy Link Print
Previous Article ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ
Next Article ರೈಲು ನಿಲ್ದಾಣಗಳಲ್ಲೂ ಏರ್‌ಪೋರ್ಟ್‌‌ ಮಾದರಿಯ ಪ್ರವೇಶ, ಲಗೇಜ್ ನಿಯಮ ಜಾರಿಗೆ ಭಾರತೀಯ ರೈಲ್ವೆ ಕ್ರಮ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?