newsics.com
ವಾಷಿಂಗ್ಟನ್: ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ತಮ್ಮ ಸಭೆ ಚೆನ್ನಾಗಿ ನಡೆದರೆ, ಉಕ್ರೇನ್-ರಷ್ಯಾ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ರಷ್ಯಾದ ನಾಯಕ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಶ್ವೇತಭವನದಲ್ಲಿ ಭೇಟಿಯಾಗಿದ್ದಾರೆ.
ಝೆಲೆನ್ಸ್ಕಿಯೊಂದಿಗಿನ ಭೇಟಿಯ ಸಮಯದಲ್ಲಿ ಟ್ರಂಪ್, ‘ಯುದ್ಧ ಕೊನೆಗೊಳ್ಳಲಿದೆ. ಅದು ಯಾವಾಗ ಕೊನೆಗೊಳ್ಳುತ್ತದೆ ಎಂದು ನಾನು ನಿಮಗೆ ಹೇಳಲಾರೆ. ಆದರೆ ಈ ಯುದ್ಧ ನಿಲ್ಲುತ್ತದೆ. ವ್ಲಾಡಿಮಿರ್ ಪುಟಿನ್ ಯುದ್ಧ ಕೊನೆಗೊಳಿಸಲು ಬಯಸುತ್ತಿದ್ದು ಝೆಲೆನ್ಸ್ಕಿ ಕೂಡ ಒಪ್ಪಿಕೊಂಡರೆ ಶೀಘ್ರದಲ್ಲೇ ಯುದ್ಧ ನಿಲ್ಲುತ್ತದೆ ಎಂದರು.
ಇಡೀ ಜಗತ್ತು ಇದರಿಂದ ಬೇಸತ್ತಿದೆ ಎಂದು ನಾನು ಭಾವಿಸುತ್ತೇನೆ. ನಾವು ಅದನ್ನು ಕೊನೆಗೊಳಿಸುತ್ತೇವೆ. ನಾನು 6 ಯುದ್ಧಗಳನ್ನು ಕೊನೆಗೊಳಿಸಿದ್ದೇನೆ. ಬಹುಶಃ ಇದು ಸುಲಭವಾದದ್ದಾಗಿರಬಹುದು ಎಂದು ನಾನು ಭಾವಿಸಿದ್ದೆ. ಆದರೆ ಅದು ಅಷ್ಟು ಸುಲಭವಲ್ಲ ಎಂದು ಟ್ರಂಪ್ ಹೇಳಿದರು.
World Record ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ