Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54
ಕರ್ನಾಟಕಪ್ರಮುಖ

CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54

Share
2 Min Read
SHARE

newsics.com

ಬೆಂಗಳೂರು: ಪಂಚ ಗ್ಯಾರಂಟಿಗಳಿಂದಾಗಿ ಸಿದ್ದರಾಮಯ್ಯ ಸರ್ಕಾರದ ವಿತ್ತೀಯ ಕೊರತೆ ಹೆಚ್ಚಳವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಹಾಗೂ ಗೃಹ ಜ್ಯೋತಿಯಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದು ಬೆಳಕಿಗೆ ಬಂದಿದೆ.

ಈ ಪಂಚ ಗ್ಯಾರಂಟಿಗಳಿಗಾಗಿ ರಾಜ್ಯ ಸರ್ಕಾರ, 2023-24ರಲ್ಲಿ ಬರೋಬ್ಬರಿ 63,000 ಕೋಟಿ ರೂಪಾಯಿ ಸಾಲ ಮಾಡಿರುವುದು ಸಿಎಜಿ ವರದಿಯಿಂದ ಬೆಳಕಿಗೆ ಬಂದಿದೆ.

ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕದ ಸಂಪನ್ಮೂಲಗಳ ಮೇಲೆ ಮತ್ತು ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ತಿಳಿಸಿದೆ.

2023-24ನೇ ಸಾಲಿನಲ್ಲಿ 5 ಗ್ಯಾರಂಟಿಗಳಿಗೆ ಸಾಲ ಮಾಡಿರುವುದು ಬೆಳಕಿಗೆ ಬಂದಿದ್ದು, ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ ಬರೋಬ್ಬರಿ 63,000 ಕೋಟಿ ಸಾಲ ಮಾಡಿದ್ದಾಗಿ CAG ವರದಿಯಲ್ಲಿ ಉಲ್ಲೇಖವಾಗಿದೆ.

5 ಗ್ಯಾರಂಟಿ ಯೋಜನೆಗೆ ಕಳೆದ ವರ್ಷದ ಸಾಲಿನಲ್ಲಿ ಹೆಚ್ಚುವರಿ ಸಾಲ ಮಾಡಲಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ವಿತ್ತೀಯ ಕೊರತೆ ಹೆಚ್ಚಳವಾಗಿದೆ. ವಿತ್ತೀಯ ಕೊರತೆ 46,623 ಕೋಟಿಯಿಂದ 65,522 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ ಎಂದು ಸಿಎಂ ಮಂಡಿಸಿದ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ.

2023-24 ಸಾಲಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ 16,964 ಕೋಟಿ ರೂ., ಗೃಹಜ್ಯೋತಿಗೆ 8,900 ಕೋಟಿ, ಅನ್ನಭಾಗ್ಯಕ್ಕೆ 7,384 ಕೋಟಿ, ಶಕ್ತಿ ಯೋಜನೆಗೆ 3200 ಕೋಟಿ, ಯುವನಿಧಿಗೆ 88 ಕೋಟಿ ರೂ. ಹೊರೆಯಾಗಿದೆ.

ಗ್ಯಾರಂಟಿ ಯೋಜನೆಗಳು, ಅದರಿಂದ ಉಂಟಾದ ಕೊರತೆಗಳಿಗೆ ಹಣ ಒದಗಿಸಲು 63,000 ಕೋಟಿ ರೂ. ನಿವ್ವಳ ಮಾರುಕಟ್ಟೆ ಸಾಲ ಪಡೆಯಲಾಗಿದೆ.

2022-23ನೇ ಸಾಲಿನ ನಿವ್ವಳ ಸಾಲಕ್ಕಿಂತ 37,000 ಕೋಟಿ ರೂ. ಹೆಚ್ಚಳವಾಗಿದೆ. 2022-23ನೇ ಸಾಲಿಗೆ ಹೋಲಿಸಿದರೆ ಗ್ಯಾರಂಟಿ ಯೋಜನೆಗಳು, ಮೂಲಸೌಕರ್ಯಕ್ಕಾಗಿ ಬಂಡವಾಳ ವೆಚ್ಚ 5,229 ಕೋಟಿ ರೂ.ಗಳಷ್ಟು ಕಡಿಮೆ ಮಾಡಲಾಗಿದೆ ಎಂದು ಸಿಎಜಿ ವರದಿ ಹೇಳಿದೆ.

2022-23ನೇ ಸಾಲಿಗೆ ಹೋಲಿಸಿದರೆ 2023-24ನೇ ಸಾಲಿನಲ್ಲಿ ಸ್ವಂತ ತೆರಿಗೆ ಆದಾಯ ಅಥವಾ ಸಂಪನ್ಮೂಲಗಳ ಸ್ವೀಕೃತಿಯಲ್ಲಿ ಹೆಚ್ಚಳವಾಗಿದೆ.

2023-24ನೇ ಸಾಲಿನಲ್ಲಿ ಒಟ್ಟು ರಾಜಸ್ವ ಸ್ವೀಕೃತಿಗಳಲ್ಲಿ ರಾಜ್ಯದ ಸ್ವಂತ ಸಂಪನ್ಮೂಲಗಳ ಪ್ರಮಾಣ ಶೇ. 76ರಷ್ಟಿದ್ದು, 2022-23ಕ್ಕೆ ಹೋಲಿಸಿದರೆ ಸ್ವಂತ ತೆರಿಗೆ ಆದಾಯ ಶೇ. 13.78ರಷ್ಟು ಹೆಚ್ಚಳವಾಗಿದೆ ಹಾಗೂ ಕೇಂದ್ರ ತೆರಿಗೆ ವರ್ಗಾವಣೆಯು ಶೇ. 19.07ರಷ್ಟು ಹೆಚ್ಚಳವಾಗಿದೆ. ಆದರೆ, ತೆರಿಗೇತರ ಆದಾಯವು 2022-23ರಲ್ಲಿ 13,914 ಕೋಟಿ ರು.ಗಳಷ್ಟಿದ್ದರೆ 2023-24ರಲ್ಲಿ 13,117 ಕೋಟಿ ರು.ಗೆ ಕುಸಿದಿದ್ದು, ಒಟ್ಟಾರೆ 797 ಕೋಟಿ ರೂ. ಇಳಿಕೆಯಾಗಿದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

2023-24ರಲ್ಲಿ ರಾಜ್ಯದ ಆದಾಯವು ಕಳೆದ ವರ್ಷಕ್ಕಿಂತ ಶೇ.1.86 ರಷ್ಟು ಹೆಚ್ಚಳವಾಗಿದೆ. ಖರ್ಚು ಶೇ.12.54 ರಷ್ಟು ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಆದಾಯಕ್ಕೆ ಪೆಟ್ಟು ಬಿದ್ದಿದೆ. ಅಷ್ಟೇ ಅಲ್ಲದೇ ಮುಂದೆ ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಆರ್ಥಿಕತೆಯ ಮೇಲೆ ಒತ್ತಡ ಬೀಳುತ್ತದೆ ಎಂದು ಸಿಎಜಿ ವರದಿ ಹೇಳಿದೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

ರೈಲು ನಿಲ್ದಾಣಗಳಲ್ಲೂ ಏರ್‌ಪೋರ್ಟ್‌‌ ಮಾದರಿಯ ಪ್ರವೇಶ, ಲಗೇಜ್ ನಿಯಮ ಜಾರಿಗೆ ಭಾರತೀಯ ರೈಲ್ವೆ ಕ್ರಮ

TAGGED:expenditure 12.54%.revenue 1.86%State government's fiscal deficit increases sharply due to guarantees
Share This Article
Facebook Twitter Copy Link Print
Previous Article ಹೊತ್ತಿ ಉರಿದ ಬಸ್: 17 ಮಕ್ಕಳು ಸೇರಿ 71 ಪ್ರಯಾಣಿಕರ ಸಾವು
Next Article Gold Rate Today Bangalore: ಗುಡ್ ನ್ಯೂಸ್ ; 9,180 ರೂಗೆ ಕುಸಿದ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?