Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ
ಕರ್ನಾಟಕಪ್ರಮುಖ

restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ

Share
2 Min Read
SHARE

newsics.com

ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ.

ರಾಜ್ಯಾದ್ಯಂತ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಈ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಿದೆ. ಒಂದು ವೇಳೆ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ.

ರಾಜ್ಯಾಧ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ / ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು.

ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸುವುದು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಕಡ್ಡಾಯವಾಗಿದೆ.

ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸುವುದು.

ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ರ‍್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್/ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಳಕೆ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ

Stress reliever basil ಒತ್ತಡ ನಿವಾರಣೆಗೆ ತುಳಸಿ‌ ಪರಿಣಾಮಕಾರಿ ಮದ್ದು! ವಿಜ್ಞಾನಿಗಳ ಸಂಶೋಧನೆ

Popular judge Frank Caprio is no more ಜನಪ್ರಿಯ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೋ ಇನ್ನಿಲ್ಲ

TAGGED:there are more restrictions on the celebration of the Gauri Ganesh festival.This time
Share This Article
Facebook Twitter Copy Link Print
Previous Article Popular judge Frank Caprio is no more ಜನಪ್ರಿಯ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೋ ಇನ್ನಿಲ್ಲ
Next Article ತ್ರಿವಳಿ ಕೊ*ಲೆ: ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?