Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮನೆ, ಕಂಪನಿಗಳ ಮೇಲೆ ಇಡಿ ದಾಳಿ
ಕರ್ನಾಟಕ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮನೆ, ಕಂಪನಿಗಳ ಮೇಲೆ ಇಡಿ ದಾಳಿ

Share
1 Min Read
SHARE

newsics.com

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರ ಮನೆ ಮತ್ತು ಕಚೇರಿಯ ಮಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಮನೆ ಮತ್ತು ಕಚೇರಿಯ ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರಿಗೆ ಸೇರಿದ ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆ, ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸ ಮತ್ತು ಅವರಿಗೆ ಸೇರಿದ ಹಲವು ಕಂಪನಿಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹಲವಾರು ಖಾಸಗಿ ವಾಹನಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳು ಶುಕ್ರವಾರ ಚಳ್ಳಕೆರೆ ಮತ್ತು ಬೆಂಗಳೂರು, ಗೋವಾದಲ್ಲಿ ಏಕಾಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮಾತ್ರವಲ್ಲದೆ ಅವರ ಸಹೋದರರಾದ ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ಅವರ ಮನೆ ಮತ್ತು ಕಚೇರಿಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಅವರಿಗೆ ಸೇರಿದ ಬೆಂಗಳೂರು, ಚಳ್ಳಕೆರೆ, ಗೋವಾ, ಚಿತ್ರದುರ್ಗ ಸೇರಿ ಒಟ್ಟು ೧೭ ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ವಿರೇಂದ್ರ ಪಪ್ಪಿ ಅವರ ಕಂಪನಿಗಳು : ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮಾಲೀಕತ್ವದ ಕಂಪನಿಗಳ ಮೂಲಕ ಮನಿಲ್ಯಾಂಡ್ರಿಂಗ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರತ್ನಾ ಗೇಮಿಂಗ್ ಸೋಲುಷನ್ಸ್ ರತ್ನ ಗೋಲ್ಡ್ ಕಂಪನಿ, ರತ್ನ ಮಲ್ಟಿ ಸೋರ್ಸ್ ಕಂಪನಿ, ಪಪ್ಪಿ ಟೆಕ್ನಾಲೋಜಿಸ್ ಕಂಪನಿ, ಪಪ್ಪಿ ಟೂರ್ಸ್ ಅಂಡ್ ಟ್ರಾವೆಲ್ಸ್, ಪಪ್ಪಿ ಬಿಯರ್ ಬಾಕ್ಸ್ ಕಂಪನಿ ಕಚೇರಿ ಮೇಲೊ ದಾಳಿ ನಡೆಸಲಾಗಿದೆ.

ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ವಿರೇಂದ್ರ ಪಪ್ಪಿ ಅವರ ನಿವಾಸ ಹಾಗೂ ಬೆಂಗಳೂರಿನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಪ್ರಸ್ಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಅವರು, ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.

TAGGED:#ED #raids #Chitradurga #Congress #MLA #KC.VirendraPappy
Share This Article
Facebook Twitter Copy Link Print
Previous Article ಆದಾಯ ತೆರಿಗೆ ಹೊಸ ಕಾಯ್ದೆಗೆ ರಾಷ್ಟ್ರಪತಿ ಅಸ್ತು
Next Article ಪುರೋಹಿತರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?