newsics.com
ರಾಂಚಿ: ಜಾರ್ಖಂಡ್ನಲ್ಲಿ ಭೀಕರ ಪ್ರವಾಹದಿಂದ ಐದು ಜನರು ಸಾವನ್ನಪ್ಪಿದ್ದು, ಒಬ್ಬರು ಕಾಣೆಯಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಭಾರೀ ಮಳೆ ಹಿನ್ನೆಲೆಯಲ್ಲಿ ಎಚ್ಚರದಿಂದ ಇರುವಂತೆ ಜನರಿಗೆ ಮುನ್ಸೂಚನೆ ನೀಡಿದ್ದಾರೆ.
ಶುಕ್ರವಾರ ರಾತ್ರಿ ಸೆರೈಕೆಲಾ-ಖರ್ಸವಾನ್ ಜಿಲ್ಲೆಯಲ್ಲಿ ಮನೆ ಕುಸಿದು ಮಹಿಳೆ ಮತ್ತು ಅವರ ಏಳು ವರ್ಷದ ಮಗ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜನಗರ ಬ್ಲಾಕ್ನ ದಂಡು ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಇನ್ನೂ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.