Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್
ದೇಶಪ್ರಮುಖ

Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್

Share
2 Min Read
SHARE

newsics.com

ನವದೆಹಲಿ: ತನ್ನ ಪತಿ ನಪುಂಸಕ. ಆತನಿಂದ ವಿಚ್ಛೇದನ ಮತ್ತು 90 ಲಕ್ಷ ರೂ. ಜೀವನಾಂಶ ಬೇಕೆಂದು ಮಹಿಳೆಯೊಬ್ಬರು ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆದರೆ, ಪತಿಯ ನಪುಂಸಕತೆ ಅಥವಾ ಅವರು ಹೆಂಡತಿಗೆ ವಂಚನೆ ಮಾಡಿದ್ದಾರೆ ಎಂಬ ಆ ಮಹಿಳೆಯ ವಾದವನ್ನು ಪುಷ್ಟೀಕರಿಸಲು ಯಾವುದೇ ಪುರಾವೆಗಳಿಲ್ಲ ಎಂದು ಆ ಮಹಿಳೆಯ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ತಿರಸ್ಕರಿಸಿದೆ.

ತನ್ನ ಪತಿ ನಿಮಿರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಲೈಂಗಿಕ ಸಂಪರ್ಕಕ್ಕೆ ಅಸಮರ್ಥರಾಗಿದ್ದಾರೆ ಎಂಬ ಕಾರಣಕ್ಕೆ ಮಹಿಳೆ ವಿಚ್ಛೇದನ ಕೋರಿದ್ದರು. ಜತೆಗೆ 90 ಲಕ್ಷ ರೂ. ಶಾಶ್ವತ ಜೀವನಾಂಶದ ಬೇಡಿಕೆ ಇಟ್ಟಿದ್ದರು.

ಮದುವೆಗೂ ಮೊದಲು ತನ್ನ ನಪುಂಸಕತೆಯ ಬಗ್ಗೆ ತಿಳಿಸದೆ ಅವರು ವಿವಾಹ ವಂಚನೆ ಮಾಡಿದ್ದಾರೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಮತ್ತು ನ್ಯಾಯಮೂರ್ತಿ ಬಿ.ಆರ್. ಮಧುಸೂಧನ್ ರಾವ್ ಅವರ ಹೈಕೋರ್ಟ್ ಪೀಠವು ಆಕೆಯ ಮೇಲ್ಮನವಿಯನ್ನು ವಜಾಗೊಳಿಸಿತು. ಅಲ್ಲದೆ, ಆಕೆಯ ಮನವಿಯನ್ನು ತಿರಸ್ಕರಿಸುವ ಕುಟುಂಬ ನ್ಯಾಯಾಲಯದ ನಿರ್ಧಾರವನ್ನು ಎತ್ತಿಹಿಡಿಯಿತು.

ಈ ದಂಪತಿ ಡಿಸೆಂಬರ್ 2013ರಲ್ಲಿ ವಿವಾಹವಾಗಿದ್ದರು. ಆದರೆ, ಮದುವೆಯಾದಾಗಿನಿಂದ ತಾವಿಬ್ಬರೂ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಪತ್ನಿ ತಮ್ಮ ಎರಡು ಹನಿಮೂನ್‌ಗಳನ್ನು ಸಹ ಉಲ್ಲೇಖಿಸಿದ್ದಾರೆ. ಒಂದು 2013ರಲ್ಲಿ ಕೇರಳದಲ್ಲಿ ಮತ್ತು ಇನ್ನೊಂದು 2014ರಲ್ಲಿ ಕಾಶ್ಮೀರದಲ್ಲಿ ನಡೆದಿತ್ತು. ಆದರೆ, ಆಕೆಯ ಪತಿಗೆ ಲೈಂಗಿಕ ಕ್ರಿಯೆ ನಡೆಸಲು ಸಾಧ್ಯವಾಗಿರಲಿಲ್ಲ. ಇದರಿಂದ ತನಗೆ ವಂಚನೆಯಾಗಿದೆ ಎಂದು ಆಕೆ ಕೋರ್ಟ್ ಮೆಟ್ಟಿಲೇರಿದ್ದಳು. ಸುಳ್ಳು ಹೇಳಿ ತನ್ನನ್ನು ಮದುವೆಯಾಗಿದ್ದಾರೆ ಎಂದು ಆಕೆ ಆರೋಪಿಸಿದ್ದರು.

ತನ್ನ ಪತಿ ರುಮಟಾಯ್ಡ್ ಸಂಧಿವಾತದಿಂದ ಬಳಲುತ್ತಿದ್ದಾರೆ. ಇದು ನಿಮಿರುವಿಕೆಯ ಸಮಸ್ಯೆಗೆ ಕಾರಣವಾಗುತ್ತದೆ ಎಂಬ ಅಂಶವನ್ನು ಅವರು ಮುಚ್ಚಿಟ್ಟಿದ್ದರು. ಇದು ಹಿಂದೂ ವಿವಾಹ ಕಾಯ್ದೆ, 1955 ರ ಅಡಿಯಲ್ಲಿ ಕ್ರೌರ್ಯಕ್ಕೆ ಸಮನಾಗಿರುತ್ತದೆ ಎಂದು ಆ ಮಹಿಳೆ ಆರೋಪಿಸಿದ್ದರು.

ಪತಿ ಹೆಂಡತಿಯ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದರು. ತಮಗೆ ಸಣ್ಣಪುಟ್ಟ ಲೈಂಗಿಕ ಸಮಸ್ಯೆ ಇದ್ದರೂ ಅದಕ್ಕೆ ಈಗಾಗಲೇ ಚಿಕಿತ್ಸೆ ಪಡೆದಿದ್ದೇನೆ ಎಂದು ಹೇಳಿಕೊಂಡರು.

ಎರಡೂ ಹನಿಮೂನ್‌ ಸೇರಿದಂತೆ ಹಲವು ಸಂದರ್ಭಗಳಲ್ಲಿ ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಮದುವೆಯಾದ 5 ವರ್ಷಗಳ ನಂತರ ತನ್ನ ಪತಿ ಲೈಂಗಿಕವಾಗಿ ದುರ್ಬಲ ಎಂದು ಹೆಂಡತಿ ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇಡಿ ದಾಳಿ ವೇಳೆ ಗೋಡೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ TMC ಶಾಸಕನ ಬಂಧನ – ವೈರಲ್ ವಿಡಿಯೋ ನೋಡಿ

ಪತಿಗೆ ಲಿವರ್ ನೀಡಿದ ಪತ್ನಿ: ಅಂಗಾಂಗ ಕಸಿ ಬಳಿಕ ಇಬ್ಬರೂ ಸಾವು

ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ವಿವಾಹಿತ ವ್ಯಕ್ತಿ ಸಾವು : ಮಹಿಳೆಗೆ 8.6 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್.!

TAGGED:High Court shocks wife who sought Rs 90 lakh alimony for divorce on grounds of eunuch husband
Share This Article
Facebook Twitter Copy Link Print
Previous Article Good news for farmers… ರೈತರಿಗೆ ಗುಡ್ ನ್ಯೂಸ್… ಅರ್ಜಿ ಹಾಕದಿದ್ದರೂ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ
Next Article Free Hospital ಚಿಕ್ಕಬಳ್ಳಾಪುರ: ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ, ಇಲ್ಲಿರಲ್ವಂತೆ ಬಿಲ್ಲಿಂಗ್ ಕೌಂಟರ್!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?