newsics.com
ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಹಚ್ಚುವ ಯಂತ್ರದ ಲೋಪ ಪ್ರಶ್ನಿಸಿ ಹೈಕೋರ್ಟ್ ಗೆ ಕಾರು ಮಾಲೀಕನೊಬ್ಬ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೊತೆಗೆ ತಾನು ಕುಡಿಯದೇ ಇದ್ದರೂ ಡ್ರಿಂಕ್ ಅಂಡ್ ಡ್ರೈವ್ ಯಂತ್ರದ ಲೋಪದಿಂದ ದಂಡ ವಿಧಿಸಿದ್ದನ್ನು ಪ್ರಶ್ನಿಸಿದ್ದಾರೆ.
ಈ ಸಂಬಂಧ ಕರ್ನಾಟಕ ಹೈಕೋರ್ಟ್ ಗೆ ಅಜಯ್ ಕುಮಾರ್ ಕಶ್ಯಪ್ ಎಂಬುವವರು ಕಾರು ಚಾಲನೆ ಮಾಡುವಾಗ ಟ್ರಾಫಿಕ್ ಪೊಲೀಸರು ತಡೆದಿದ್ದರು. ಮದ್ಯಪಾನ ಮಾಡದಿದ್ದರೂ ಯಂತ್ರದಲ್ಲಿ ಎರಡು ಬಾರಿ ನೆಗೆಟಿವ್ ತೋರಿಸಿ 3ನೇ ಬಾರಿ ಪಾಸಿಟಿವ್ ತೋರಿಸಿದೆ. ತಾನು ಕುಡಿದಿಲ್ಲವೆಂದು ಹೇಳಿದರೂ ಒಪ್ಪದ ಪೊಲೀಸರು ಅವರ ಕಾರು ಸೀಜ್ ಮಾಡಿ 10 ಸಾವಿರ ರೂ. ದಂಡ ವಿಧಿಸಿದ್ದಾರೆ.
ತಾವೇ ಖಾಸಗಿ ಲ್ಯಾಬ್ ನಲ್ಲಿ ಟೆಸ್ಟ್ ಮಾಡಿಸಿದಾಗಲೂ ನೆಗೆಟಿವ್ ಬಂದಿದೆ. ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಯಂತ್ರದಲ್ಲೇ ಲೋಪವಿದೆ ಎಂಬುದಾಗಿ ವಾದಿಸಿದ್ದಾರೆ.
ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಯಂತ್ರದಲ್ಲೇ ಲೋಪವಿದ್ದಾಗ ಕುಡಿತದ ಆರೋಪ ಒಪ್ಪಲಾಗುವುದಿಲ್ಲ. ಹೀಗಾಗಿ ಈ ಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ನ್ಯಾ.ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದ್ದು, ಜೊತೆಗೆ ಸರ್ಕಾರ ಮತ್ತು ಟ್ರಾಫಿಕ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.