newsics.com
ಕೆಜಿಎಫ್ ಸಿನಿಮಾ ಮೂಲಕ ‘ಕೆಜಿಎಫ್ ಚಾಚಾ’ ಎಂದೇ ಫೇಮಸ್ ಆದ ಹರೀಶ್ ರಾಯ್ ಇದೀಗ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಿನಿಮಾದಲ್ಲಿ ರಾಕಿ ಭಾಯ್ನ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಈ ಮೊದಲು ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರಗಳ ಮೂಲಕ ಹರೀಶ್ ಗಮನ ಸೆಳೆದಿದ್ದರು. ಈಗ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡಿದೆ.
ಹರೀಶ್ ರಾಯ್ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ತುಂಬಾನೇ ಹದಗೆಟ್ಟಿದೆ. ಅವರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಥೈರಾಯ್ಡ್ ಕ್ಯಾನ್ಸರ್ನಿಂದ ಅವರು ಬಳಲುತ್ತಿದ್ದು, ಹೊಟ್ಟೆ ಹಾಗೂ ಕಾಲಿನ ಭಾಗಕ್ಕೆ ನೀರು ತುಂಬಿದೆ.
ಅವರು ಸಾವು-ಬದುಕಿನ ನಡುವೆ ಹೋರಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಅವರು ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರಿಗೆ ಬೇಸರ ಆಗಿದೆ.
ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಕಾಣಿಸಿಕೊಂಡಿದೆ. ಅದು ಈಗ ಹೊಟ್ಟೆಗೂ ಪಸಿರಿಸಿದ್ದು, ಹೊಟ್ಟೆ ಊದುಕೊಂಡಿದೆ. ಅವರು ಸಾಕಷ್ಟು ತೆಳ್ಳಗಾಗಿದ್ದಾರೆ. ಅವರನ್ನು ನೋಡಿ ಅನೇಕರು ಬೇಸರ ಹೊರಹಾಕಿದ್ದಾರೆ. ಕೆಜಿಎಫ್ ಚಾಚಾನ ಸ್ಥಿತಿ ನೋಡಿ ಅನೇಕರು ಕಣ್ಣೀರು ಹಾಕಿದ್ದಾರೆ. ಯಶ್ ಬಳಿ ಸಹಾಯ ಮಾಡುವಂತೆ ಫ್ಯಾನ್ಸ್ ಒತ್ತಾಯಿಸಿದ್ದಾರೆ.
https://www.instagram.com/reel/DN3DfIBZqOb/?igsh=MTl0ejB6YjdodmRiMQ==
ಅಮೆರಿಕದಿಂದಲೇ ಮುಧೋಳದ ಮನೆಯಲ್ಲಿ ಕಳ್ಳತನ ತಪ್ಪಿಸಿದ ಟೆಕ್ಕಿ! ಏನ್ಮಾಡಿದ್ರು ಶೃತಿ?