newsics.com
ಬೆಂಗಳೂರು: ಆನ್ ಲೈನ್ ಹಾಗೂ ಆಪ್ ಲೈನ್ ಗ್ಯಾಬ್ಲಿಂಗ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕೋರ್ಟ್ ಗೆ ಹಾಜರು ಪಡಿಸಲಾಯಿತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮತ್ತೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯವರನ್ನು ಇ.ಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆರೋಪದ ಮೇಲೆ ಬಂಧಿಸಿತ್ತು. ಅವರ ಮನೆಯಲ್ಲಿ ಮತ್ತು ಸಂಬಂಧ ಪಟ್ಟ ಕಡೆ ದಾಳಿ ನಡೆಸಿದಾಗ ಕೋಟಿ ಕೋಟಿ ಹಣ, ವಿದೇಶಿ ಕರೆನ್ಸಿ, ಚಿನ್ನಾಭರಣ, ಕಾರ್ಡ್ಗಳು ಎಲ್ಲಾ ಪತ್ತೆಯಾಗಿದ್ದವು. ಈ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು 5 ದಿನ ಕಸ್ಟಡಿಗೆ ಪಡೆದು ನಿರಂತರ ವಿಚಾರಣೆ ನಡೆಸಿದರು. ಈ ವೇಳೆ ಶಾಸಕರಿಗೆ ಅಧಿಕಾರಿಗಳು ಸಾಲು ಸಾಲು ಸಮಸ್ಯೆ ಕೊಟ್ಟಿದ್ದರು ಎಂದು ಆರೋಪಿಸಿದ್ದಾರೆ.
2011ರ ಕೇಸ್ ರದ್ದಾಗಿದೆ. 2016ರ ಸಿಬಿಐ ಕೇಸ್ ಸಹ ಕ್ಲೋಸ್ ಆಗಿದೆ. ಯಾವ ಪ್ರಕರಣ ಆಧರಿಸಿ ಇಸಿಐಆರ್ ದಾಖಲಿಸಿದ್ದೀರಿ ಎಂಬುದಾಗಿ ಇಡಿ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಮೂರ್ತಿಗಳು ಕೇಳಿದರು. ಈ ವೇಳೆ ಮಾತನಾಡಲು ಮುಂದಾದ ಇಡಿ ಅಧಿಕಾರಿಗೆ ಜಡ್ಜ್ ತರಾಟೆಗೆ ತೆಗೆದುಕೊಂಡರು.