newsics.com
ನಾಳೆ(ಅ.30) ಮೈಸೂರಿನಲ್ಲಿ ನಡೆಯುವ ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲಿನ ನಿಷೇಧ ಹಿಂಪಡೆಯುವ ಸಾಧ್ಯತೆ ಹೆಚ್ಚಾಗಿದೆ.
ಕಳೆದ ಮೂರು ತಿಂಗಳ ಹಿಂದೆ ಅವರನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಅವರ ಬ್ಯಾನ್ ಲಿಫ್ಟ್ ಮಾಡುವ ಪ್ರಕ್ರಿಯೆ ತೆರೆಮರೆಯಲ್ಲಿ ಜೋರಾಗಿಯೇ ಸಾಗಿದೆ.
ನಾಳೆ ಮೈಸೂರಿನಲ್ಲಿ ನಡೆಯುವ ಮಹತ್ವದ ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳುವ ಸಾದ್ಯತೆಗಳು ಹೆಚ್ಚಾಗಿವೆ.
ಈ ಸಂಬಂಧ ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಸೋನು ನಿಗಮ್ ಅವರು ಈಗಾಗಲೇ ಕನ್ನಡಿಗರ ಬಳಿ ಕ್ಷಮೆ ಕೇಳಿದ್ದಾರೆ. ಇದಾದ ಬಳಿಕ ಸಮಸ್ಯೆ ಬಗೆಹರಿದಂತಾಗಿದೆ. ಓರ್ವ ಕಲಾವಿದನಿಗೆ ನಿಷೇಧ ಹೇರುವುದು ಸರಿಯಲ್ಲ ಎಂದು ಹೇಳಿದ್ದರು.
ವಾಣಿಜ್ಯ ಮಂಡಳಿ ಅಧ್ಯಕ್ಷರ ಈ ಹೇಳಿಕೆಯಿಂದ ಸಾಕಷ್ಟು ಜನರನ್ನು ಕೆರಳಿಸಿತ್ತು. ಮತ್ತು ಇದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು, ವಾಣಿಜ್ಯ ಮಂಡಳಿ ನಿರ್ಧಾರವಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನಲ್ಲಿ ನಡೆಯುವ ವಾಣಿಜ್ಯ ಮಂಡಳಿ ಸಭೆ ಸಾಕಷ್ಟು ಕುತೂಹಲ ಕೆರಳಿಸಿದೆ.
ಸಾಕಷ್ಟು ಚಿತ್ರ ನಿರ್ಮಾಪಕರು ಸೋನು ನಿಗಮ್ ಮೇಲಿನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಹೇಳುತ್ತಿದ್ದರೆ, ಕೆಲವರು ಈ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ.
ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಟಿಸಿರುವ ನಿದ್ರಾದೇವಿ ನೆಕ್ಸ್ಟ್ ಡೋರ್ ಚಿತ್ರದ ಟೈಟಲ್ ಸಾಂಗ್ ಅನ್ನು ಸೋನು ನಿಗಮ್ ಹಾಡಿದ್ದಾರೆ. ಈ ಚಿತ್ರ ಸೆಪ್ಟಂಬರ್‌ನಲ್ಲಿ ರಿಲೀಸ್‌ಗೆ ಸಿದ್ದವಾಗಿದೆ.
ಈ ಹಿನ್ನೆಲೆಯಲ್ಲಿ ಗಾಯಕ ಸೋನು ನಿಗಮ್ ಮೇಲಿನ ನಿಷೇಧವನ್ನು ಹಿಂಪಡೆಯಲು ವಾಣಿಜ್ಯ ಮಂಡಳಿ ನಿರ್ಧರಿಸಿದೆ ಎಂಬ ಮಾತುಗಳು ಇದೀಗ ಗಾಂಧಿನಗರದಲ್ಲಿ ಕೇಳಿಬರುತ್ತಿದೆ.