newsics.com
ಬೆಂಗಳೂರು : ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವನ್ನಪ್ಪಿದ್ದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿಡಿಮದ್ದುಗಳ ಬಳಕ ನಿಷೇಧ ಮಾಡಲಾಗಿದೆ.
ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧಿಸಲಾಗಿದೆ. ಪಟಾಕಿ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
ಇದೀಗ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಸೇರಿದಂತೆ ಸಾರ್ವಜನಿಕ ಮತ್ತು ಧಾರ್ಮಿಕ ಸಭೆ ಸಮಾರಂಭಗಳಲ್ಲಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಖಡಕ್ ಆದೇಶ ಹೊರಡಿಸಿದ್ದಾರೆ.