newsics.com
ಛತ್ತೀಸ್ಗಢ:ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದ ರಾಯಗಢದ ಫಿಟ್ಟಿಂಗ್‌ಪರಾ ಗ್ರಾಮದಲ್ಲಿ ನಡೆದಿದೆ.
25 ವರ್ಷದ ವ್ಯಕ್ತಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಅವರ ಚಿಕ್ಕಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಜಿತ್ ಖಾಲ್ಖೋ ರಾತ್ರಿ 8.30 ರ ಸುಮಾರಿಗೆ ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಮೂವರು ವ್ಯಕ್ತಿಗಳು ಬಂದು ದಾಳಿ ನಡೆಸಿದ್ದಾರೆ.
ಅವರ ಮೇಲೆ ಪದೇ ಪದೆ ಹರಿತವಾದ ಕೊಡಲಿಯಿಂದ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದರು, ಅವರನ್ನು ಉಳಿಸಲು ಚಿಕ್ಕಪ್ಪ ಸುರೇಶ್ ಮಿಂಜ್ ಪ್ರಯತ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಲಾಯಿತು. ಸುಜಿತ್‌ನ ಸಾಕು ನಾಯಿ ಜತೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಯನ್ನು ನೋಡಿ ಅದು ಬೊಗಳಲು ಆರಂಭಿಸಿದಾಗ ಈ ಜಗಳ ಶುರುವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.