Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು
ಕರ್ನಾಟಕಪ್ರಮುಖ

ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು

Share
2 Min Read
SHARE

newsics.com

ಬಾಗಲಕೋಟೆ: ಇಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಪ್ರೇಮಾಂಕುರವಾಗಿತ್ತು. ಶಾಲೆ ಬಿಟ್ಟ ನಂತರ ನಡೆದ ಘಟನೆಯ ಪರಿಣಾಮ ವಿದ್ಯಾರ್ಥಿನಿ ಈಗ ಗರ್ಭಿಣಿಯಾಗಿದ್ದಾಳೆ.

ಈ ಹಿನ್ನೆಲೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಅವರಿಬ್ಬರೂ ಒಂದೇ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತರು. ಇಬ್ಬರೂ ಈ ಹಿಂದೆ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಆಗಲೇ ಇಬ್ಬರು ಹತ್ತಿರವಾಗಿದ್ದರು. ಶಾಲೆ ಬಿಟ್ಟ ಮೇಲೆ ಅಪ್ರಾಪ್ತೆಯ ಮೇಲೆ ಅಪ್ರಾಪ್ತ ಅತ್ಯಾ*ಚಾರ ಎಸಗಿದ್ದನಂತೆ. ಇದೀಗ ಫೋಕ್ಸೋ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಣ ಅತ್ಯಾ*ಚಾರ ಎಸಗಿದ್ದು ಮಾತ್ರವಲ್ಲ ಸಂತ್ರಸ್ತೆ ಈಗ 2 ತಿಂಗಳ ಗರ್ಭಿಣಿಯಾಗಿದ್ದಾಳೆ.

ಈ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತೆಯೊಬ್ಬಳ ಮೇಲೆ ಅಪ್ರಾಪ್ತನೇ ಅತ್ಯಾ*ಚಾರ ಎಸಗಿದ್ದು, ಈ ಪ್ರಕರಣವು ಈಗ ಸ್ಥಳೀಯವಾಗಿ ಹಾಗೂ ಕಾನೂನು ವಲಯದಲ್ಲಿ ದೊಡ್ಡ ಚರ್ಚೆಯ ವಿಷಯವಾಗಿದೆ.

ಮೂಲಗಳ ಪ್ರಕಾರ, ಇಳಕಲ್ ತಾಲೂಕಿನ ಕಂದಗಲ್ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಇಬ್ಬರು ಮಕ್ಕಳು ಓದುತ್ತಿದ್ದರು. ಆ ಸಂದರ್ಭದಲ್ಲಿ, ಸಂತ್ರಸ್ತೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಆರೋಪಿಯಾದ ಅಪ್ರಾಪ್ತ 8ನೇ ತರಗತಿಯಲ್ಲಿ ಓದುತ್ತಿದ್ದ.

ಇದೀಗ ಅಪ್ರಾಪ್ತೆಯ ವಯಸ್ಸು 16 ವರ್ಷದವಳು ಹಾಗೂ ಆರೋಪಿಯಾದ ಬಾಲಕನ ವಯಸ್ಸು 17 ವರ್ಷ. ಅಪ್ರಾಪ್ತೆ ಈಗಾಗಲೇ ಎರಡು ತಿಂಗಳ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.

ಈಗ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಪೊಕ್ಸೋ (POCSO) ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ತನಿಖೆ ಆರಂಭಗೊಂಡಿದ್ದು, ಬಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪೊಕ್ಸೋ ಕೇಸಿನ ಸ್ವರೂಪ ಗಂಭೀರವಾದುದರಿಂದ, ಅಪ್ರಾಪ್ತ ಆರೋಪಿಯನ್ನು ಕಾನೂನು ಪ್ರಕ್ರಿಯೆಯಂತೆ ಕಿಶೋರ್ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಸಂತ್ರಸ್ತೆಯ ಸುರಕ್ಷತೆ ಹಾಗೂ ಚಿಕಿತ್ಸೆಗಾಗಿ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಕೈಗೊಂಡಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಅಪ್ರಾಪ್ತರಲ್ಲಿ ಜಾಗೃತಿ ಕೊರತೆ, ಶಿಕ್ಷಣದ ಕೊರತೆ ಹಾಗೂ ಪೋಷಕರ ಮೇಲ್ವಿಚಾರಣೆಯ ಅಗತ್ಯ ಎಂಬ ಚರ್ಚೆಗಳಿಗೆ ಕಾರಣವಾಗಿದೆ.

TAGGED:Minor Love: Morarji had a crush on her when she was in schoolnow she is pregnantPOCSO case filed
Share This Article
Facebook Twitter Copy Link Print
Previous Article ನಟ ಹರೀಶ್ ರಾಯ್‌‌ ಚಿಕಿತ್ಸೆಗೆ 11 ಲಕ್ಷ ರೂ. ನೀಡಿದ ಧ್ರುವ ಸರ್ಜಾ, ಕಲಾವಿದೆಗೆ ಖುಷಿ
Next Article RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?