newsics.com
ಕಠಿಣ ಪರಿಶ್ರಮ, ಏಕಾಗ್ರತೆ, ನಿರಂತರ ಪ್ರಯತ್ನದಿಂದ ಸಾಧನೆ ಎಂಬುವಂತಹದ್ದು ಸಾಧ್ಯ ಎಂಬ ಮಾತಿದೆ. ಈ ಮಾತಿಗೆ ಉದಾಹರಣೆಯೆಂಬಂತೆ ತನ್ನ ಕಠಿಣ ಪರಿಶ್ರಮ. ನಿರಂತರ ಪ್ರಯತ್ನದ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿಶ್ವ ದಾಖಲೆಯನ್ನು ಮಾಡಿದ್ದಾರೆ.
ಸುದೀರ್ಘ 216 ಗಂಟೆ ಅಂದರೆ ಸತತ 9 ದಿನಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪಿರೇರಾ ಸತತ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ವಿದುಷಿ ದೀಕ್ಷಾ ಸತತ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ಹೊಸ ದಾಖಲೆ ಬರೆದಿದ್ದಾರೆ.
216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ದಾಖಲೆ ಬರೆದ ವಿದುಷಿ ದೀಕ್ಷಾ:
ಸತತ 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ಹೊಸ ದಾಖಲೆಯನ್ನು ಬರೆದಿದ್ದಾರೆ. ವಿದುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪದವಿ ಕಾಲೇಜಿನಲ್ಲಿ ಆ. 21 ರಂದು ಮಧ್ಯಾಹ್ನ 3.30 ಗಂಟೆಗೆ ಭರತನಾಟ್ಯದ ಪ್ರದರ್ಶನವನ್ನು ಆರಂಭಿಸಿ, ಆ. 30 ರ ಮಧ್ಯಾಹ್ನ 3.30 ಕ್ಕೆ ಪೂರ್ಣಗೊಳಿಸಿ, ಈ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದ್ದಾರೆ.
https://www.instagram.com/reel/DN7IoA_Aij8/?igsh=OXllZ2RqZ3B3cTIx