newsics.com
ಪ್ರಪಂಚದಾದ್ಯಂತ ಹೆಚ್ಚಿನ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಇದು ಗ್ಲೂಕೋಸ್ನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸುತ್ತದೆ ಮತ್ತು ಸಾಕಷ್ಟು ಇನ್ಸುಲಿನ್ನ್ನು ಉತ್ಪಾದಿಸುತ್ತದೆ. ಹೀಗಾಗಿ ಈ ಸ್ಥಿತಿಯನ್ನು ಹೊಂದಿರುವ ಜನರು ಸಾಮಾನ್ಯವಾಗಿ ರಕ್ತದಲ್ಲಿ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿರುತ್ತಾರೆ. ಅದು ಆರೋಗ್ಯಕ್ಕೆ ಹಾನಿಕಾರವಾಗುವುದರ ಜೊತೆಗೆ ಕೆಲವೊಮ್ಮೆ ಅವುಗಳು ದೇಹದ ಅಂಗಗಳ ಮೇಲು ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಸರಿಯಾದ ರೀತಿಯ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಪದ್ಧತಿಯೊಂದಿಗೆ ಮಧುಮೆಹವನ್ನು ನಿಯಂತ್ರಿಸಬಹುದು. ಓಟ್ಮೀಲ್ ಮಧುಮೇಹಿಗಳಿಗೆ ಉತ್ತಮವಾದ ಆಹಾರವೇ ಎಂಬುದರ ಬಗ್ಗೆ ಹೇಳುತ್ತೇವೆ.
ಓಟ್ಮೀಲ್ನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಪೌಷ್ಟಿಕ ತಜ್ಞರು ಕಂಡುಕೊಂಡಿದ್ದಾರೆ. ಮಧುಮೇಹವನ್ನು ನಿಯಂತ್ರಿಸಲು ಓಟ್ಸ್ ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಓಟ್ಸ್ ಕರಗುವ ಪೈಬರ್ ಅಂಶಗಳಿಂದ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಓಟ್ ಮೀಲ್ ನಮ್ಮ ಕರುಳಿನಿಂದ ನೇರವಾಗಿ ಹೀರಲ್ಪಡುವ ಬೀಟಾ-ಗ್ಲುಕನ್ ಎಂದು ಕರೆಯಲ್ಪಡುವ ಸಾಕಷ್ಟು ಕರಗುವ ಫೈಬರ್ ಅಂಶಗಳನ್ನು ಹೊಂದಿರುತ್ತದೆ. ಇದು ರಕ್ತ ಚಲನೆಗೆ ಗ್ಲೂಕೋಸ್ನ ನಿಧಾನಗತಿಯ ಬಿಡುಗಡೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ಓಟ್ಸ್ನಲ್ಲಿರುವ ಫೈಬರ್ ಅಂಶದಿಂದ ಉತ್ತಮವಾದ ಬ್ಯಾಕ್ಟೀರಿಯಾದ ಬೆಳವಣಿಗೆಯು ಆರೋಗ್ಯಕರ ಕರುಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಹೀಗಾಗಿ ಮಧುಮೇಹಿಗಳು ಪೋಷಕಾಂಶಗಳ ನಿಧಾನ ಮತ್ತು ಹೀರಿಕೊಳ್ಳುವಿಕೆಯನ್ನು ಅನುಭವಿಸಬಹುದು.
ಓಟ್ಸ್ ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್ ಮತ್ತು ಫೈಬರ್ನಿಂದ ಸಮೃದ್ಧವಾಗಿದೆ. ಅದು ನಮ್ಮನ್ನು ಹೆಚ್ಚು ಕಾಲ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಹೀಗಾಗಿ ನಾವು ಕಡಿಮೆ ತಿನ್ನುತ್ತೇವೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದನ್ನು ತಡೆಯುತ್ತೇವೆ.
ಓಟ್ಸ್ ಮಧುಮೇಹಿಗಳ ಹೃದಯದ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ ಮತ್ತು ದೇಹದಲ್ಲಿ ಕೊಲೆಸ್ಟ್ರಾಲ್ನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.