newsics.com
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ.
ವಿದೇಶಿ NGO ಗಳಿಂದ ಹಣ ಫಂಡಿಂಗ್ ಆಗಿದೆಯಾ ಎಂಬ ಅನುಮಾನ ಹಿನ್ನೆಲೆಯಲ್ಲಿ ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್ ಗಳ ಬಗ್ಗೆ ಇಡಿ ಮಾಹಿತಿ ಸಂಗ್ರಹ ಮಾಡುವ ಕೆಲಸ ಆರಂಭಿಸಿದೆ. ಹೀಗಾಗಿ ಕೆಲ ಅಕೌಂಟ್ ಗಳ ಮಾಹಿತಿ ನೀಡುವಂತೆ ಬ್ಯಾಂಕ್ಗೆ ಇಡಿ ಪತ್ರದ ಮೂಲಕ ಮನವಿ ಮಾಡಿದೆ.
ಧರ್ಮಸ್ಥಳ ಕೇಸ್ ಗೆ ವಿದೇಶಗಳಿಂದ ಫಂಡಿಂಗ್ ಆಗಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಎನ್ ಜಿಒಗಳಿಂದ ಫಂಡಿಂಗ್ ಆಗಿದೆಯಾ? ಎಂಬ ಅನುಮಾನವಿದೆ.
ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಗಳು, ವಿದೇಶದಿಂದ ಹಣ ಬಂದರೆ ಅದಕ್ಕೆ ಕಾರಣವೇನು ಎಂಬುದನ್ನು ತಿಳಿಸುವಂತೆ ಬ್ಯಾಂಕ್ಗಳಿಗೆ ಪತ್ರದ ಮೂಲಕ ಮನವಿ ಮಾಡಲಾಗಿದೆ. ಈಗಾಗಲೇ ಹಲವು ಬ್ಯಾಂಕ್ಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ. ಆದರೆ ಇನ್ನಷ್ಟು ಬ್ಯಾಂಕ್ಗಳ ಉತ್ತರಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಎಲ್ಲ ಮಾಹಿತಿ ಸಂಗ್ರಹವಾದ ಮೇಲೆ ಮುಂದಿನ ಕ್ರಮವನ್ನು ಇಡಿ ಅಧಿಕಾರಿಗಳು ಕೈಗೊಳ್ಳಲಿದ್ದಾರೆ.