newsics.com
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ದರ್ಶನ್ ಹಾಗೂ ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಈ ಪ್ರಕರಣದ ಕೆಲ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರೆ ಆರೋಪಿಗಳನ್ನ ಬೇರೆ ಜೈಲಿಗೆ ಹಾಕುವುದರ ಕುರಿತು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ನಟ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸದ್ಯ ಕುತೂಹಲ ಮೂಡಿಸಿದೆ. ಇವತ್ತು 64ನೇ ಸೆಷನ್ ಕೋರ್ಟ್ನಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ಆದ್ರೆ ವಿಚಾರಣೆ ಮುಂದೂಡಿಕೆ ಆಗಿರುವ ಕಾರಣ, ನಾಳೆ ಸಂಜೆವರೆಗೂ ಪರಪ್ಪನ ಅಗ್ರಹಾರದಲ್ಲೇ ದಾಸ ವಾಸ್ತವ್ಯ ಮಾಡಲಿದ್ದಾರೆ.
ಇವತ್ತು ನಟ ದರ್ಶನ್ ಬಳ್ಳಾರಿ ಶಿಫ್ಟ್ ವಿಚಾರವಾಗಿ ವಾದ- ಪ್ರತಿವಾದ ನಡೆದಿದ್ದು, ಪರಪ್ಪನ ಅಗ್ರಹಾರದ ಪಂಜರದಲ್ಲಿರುವ ದಾಸನಿಗೆ ಟೆನ್ಷನ್ ಹೆಚ್ಚಾಗಿದೆ.
ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿ, ಆಡಳಿತಾತ್ಮಕ ದೃಷ್ಟಿಯಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವಂತೆ ಮನವಿ ಮಾಡಿದ್ದಾರೆ.