newsics.com
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಹಲವು ಕಡೆ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಸೆ. 6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸೆಪ್ಟೆಂಬರ್ ನಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.