newsics.com
ಯಾದಗಿರಿ: ಕಾನ್ಸ್ ಟೇಬಲ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಇಬ್ಬರೂ ಚಿಕ್ಕಮ್ಮನ ಮೇಲೆಯೇ ನಿರಂತರ ಅತ್ಯಾಚಾರವೆಸಗಿರುವ ಘಟನೆ ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಾದಗಿರಿ ಸಂಚಾರಿ ಠಾಣೆ ಕಾನ್ಸ್ ಟೇಬಲ್ ರಮೇಶ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಲಕ್ಷ್ಮಣ್ ಇಬ್ಬರೂ ತಮ್ಮ ಚಿಕ್ಕಪ್ಪನ ಪತ್ನಿ ಚಿಕ್ಕಮ್ಮನ ಮೇಲೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ.
ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಚಪೇಟ್ಲಾ ಗ್ರಾಮದ ನಿವಾಸಿಯಾಗಿರುವ ಸಂತ್ರಸ್ತೆಕಳೆದ ಏಳು ವರ್ಷದಿಂದ ತಮ್ಮ ಮೇಲೆ ಲೈಂ*ಗಿಕ ದೌರ್ಜನ್ಯ ನಡೆದಿದೆ ಎಂದು ಇಬ್ಬರು ಸೋದರರ ಮೇಲೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಬ್ಬರು ಆರೋಪಿಗಳಿಗೆ ಮಹಿಳೆ ಸಂಬಂಧದಲ್ಲಿ ಚಿಕ್ಕಮ್ಮ ಆಗಬೇಕು ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸಂತ್ರಸ್ತೆ ಯಾದಗಿರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 7 ವರ್ಷಗಳಿಂದ ಜೀವಬೆದರಿಕೆ ಹಾಕಿ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.