Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐಷಾರಾಮಿ ಜೀವನ ಕಂಡಿದ್ದ ಡಿ ಬಾಸ್ ಗೆ ​ ಇದೀಗ ಜೈಲಿನಲ್ಲಿ ನಿತ್ಯ ನರಕ ದರ್ಶನ
ಕರ್ನಾಟಕ

ಐಷಾರಾಮಿ ಜೀವನ ಕಂಡಿದ್ದ ಡಿ ಬಾಸ್ ಗೆ ​ ಇದೀಗ ಜೈಲಿನಲ್ಲಿ ನಿತ್ಯ ನರಕ ದರ್ಶನ

Share
1 Min Read
SHARE

newsics.com

ಬೆಂಗಳೂರು :  ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿ ಜೈಲು ಸೇರಿರುವ ದರ್ಶನ್ ಪರಪ್ಪನ ಅಗ್ರಹಾರದ ಕಂಬಿ ಹಿಂದೆ ದಿನದೂಡ್ತಿದ್ದಾರೆ. ದರ್ಶನ್​​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಸಲ್ಲಿಕೆ ಆಗಿರುವ ಅರ್ಜಿ ವಿಚಾರಣೆ ನಡೆದಿದೆ.

ಆದರೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ಗೆ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ. ದರ್ಶನ್‌ ಶೂ ಹಾಕಿಕೊಂಡಿದ್ದರೆ ಅದನ್ನು ಜೈಲಾಧಿಕಾರಿಗಳು ಬಿಚ್ಚಿಸುತ್ತಾರೆ. ಊಟದ ತಟ್ಟೆಯನ್ನು ಎಸೆದು ಹೋಗುತ್ತಾರೆ ಎಂದು ನಟನ ಪರ ವಕೀಲರು ಮಂಗಳವಾರ ನ್ಯಾಯಾಲಯದ ಮುಂದೆ ಆರೋಪಿಸಿದ್ದಾರೆ.

ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ವಿಚಾರಣಾಧೀನ ಕೈದಿಗೆ ನೀಡಬಹುದಾದ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿ ಇತರೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವಂತೆ ಕೇಳುತ್ತಿದ್ದೇವೆ. ಕಾನೂನು ಪ್ರಕಾರ ಏನು ಕೊಡಬೇಕೋ ಅದನ್ನು ಕೊಡಲಿ. ಯಾವ ಕಾನೂನಿನ ಅಡಿ ಈ ಸೌಲಭ್ಯ ಕೊಡಲಾಗುವುದಿಲ್ಲವೆಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಆರೋಪಿಗೆ ಜೈಲಿನಲ್ಲಿ ಸೆಲೆಬ್ರಿಟಿ ಸ್ಥಾನಮಾನ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆಯೇ ಹೊರತು ವಿಚಾರಣಾಧೀನ ಕೈದಿಗೆ ಕನಿಷ್ಠ ಸೌಲಭ್ಯಗಳನ್ನು ನೀಡಬಾರದು ಎಂದು ಹೇಳಿಲ್ಲ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ವೆಟರ್‌ ನೀಡುವುದಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಈ ವೇಳೆ ಜಡ್ಜ್​ ನೀವು ಮನವಿ ಸಲ್ಲಿಸಿದ್ದೀರಾ ಎಂದು ಪ್ರಶ್ನೆ ಮಾಡಿದ್ರು. ದರ್ಶನ್‌ ಪರ ವಕೀಲರು ಮೌಖಿಕವಾಗಿ ಮಾಡಿರುವ ನಮ್ಮ ಮನವಿ ಬಗ್ಗೆ ಜೈಲು ಅಧಿಕಾರಿಗಳು ಉದಾಸೀನತೆ ತೋರುತ್ತಿದ್ದಾರೆ ಎಂದು ಹೇಳಿದ್ದಾರೆ.

 

 

 

TAGGED:#actor #Darshan #police #custody #renukaswami #murdercase
Share This Article
Facebook Twitter Copy Link Print
Previous Article ಆಸ್ತಿಗಾಗಿ ತಂದೆಗೆ ಬ್ಲಾಕ್‌ಮೇಲ್‌ ಮಾಡಿದ ಮಗ ಇದೀಗ ಪೊಲೀಸರ ಅತಿಥಿ
Next Article ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ – 14 ಜನ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?