newsics.com
ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ಜಂಗಮ್ ಬಾಗ್‌ನಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಆರು ಜನರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸಂಜೆ 6.30 ರ ಸುಮಾರಿಗೆ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಗುಡ್ಡದ ದೊಡ್ಡ ಭಾಗ ಹಠಾತ್ತನೆ ಕುಸಿದು ಎರಡು ಮನೆಗಳು ನಜ್ಜುಗುಜ್ಜಾಗಿದ್ದು, ಕುಟುಂಬಗಳು ಒಳಗೆ ಸಿಲುಕಿಕೊಂಡಿವೆ ಎಂದು ವರದಿಯಾಗಿದೆ.
ಅಧಿಕಾರಿಗಳ ಪ್ರಕಾರ, ಇದುವರೆಗೆ ಆರು ಶವಗಳನ್ನು ಹೊರತೆಗೆಯಲಾಗಿದ್ದು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ರಕ್ಷಣಾ ಕಾರ್ಯಾಚರಣೆಯನ್ನು ನಡೆಯುತ್ತಿದ್ದು, ಇನ್ನೂ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.