newsics.com
ಇಸ್ಲಾಮಾಬಾದ್: ಪಾಕಿಸ್ತಾನದ ನೈಋತ್ಯ ಪ್ರಾಂತ್ಯದ ಬಲೂಚಿಸ್ತಾನದಲ್ಲಿ ರಾಜಕೀಯ ರ್ಯಾಲಿಯನ್ನು ವೇಳೆ ಆತ್ಮಹತ್ಯಾ ಬಾಂಬರ್ ನಡೆಸಿದ ದಾಳಿಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ
ಬಲೂಚಿಸ್ತಾನ್ ರಾಷ್ಟ್ರೀಯ ಪಕ್ಷದ(ಬಿಎನ್‌ಪಿ) ನೂರಾರು ಸದಸ್ಯರು ಪ್ರಾಂತೀಯ ರಾಜಧಾನಿ ಕ್ವೆಟ್ಟಾದಲ್ಲಿನ ಕ್ರೀಡಾಂಗಣದ ಪಾರ್ಕಿಂಗ್ ಸ್ಥಳದಲ್ಲಿ ಸೇರಿದ್ದ ವೇಳೆ ನಡೆದ ಆ ಸ್ಫೋಟದಲ್ಲಿ ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಕನಿಷ್ಠ ಏಳು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.