Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM DK is the second richest minister ದೇಶದಲ್ಲೇ ಡಿಸಿಎಂ ಡಿಕೆ ಎರಡನೇ ಶ್ರೀಮಂತ ಸಚಿವ! ಮೊದಲ ಸ್ಥಾನ ಯಾರಿಗೆ?
ಕರ್ನಾಟಕದೇಶಪ್ರಮುಖ

DCM DK is the second richest minister ದೇಶದಲ್ಲೇ ಡಿಸಿಎಂ ಡಿಕೆ ಎರಡನೇ ಶ್ರೀಮಂತ ಸಚಿವ! ಮೊದಲ ಸ್ಥಾನ ಯಾರಿಗೆ?

Share
2 Min Read
SHARE

newsics.com

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ.

ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಪ್ರಮಾಣಪತ್ರಗಳನ್ನು ವಿಶ್ಲೇಷಿಸಿ ಎಡಿಆರ್ ಈ ವರದಿ ಬಿಡುಗಡೆ ಮಾಡಿದೆ.

ಕರ್ನಾಟಕದಲ್ಲಿ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರು ಇದ್ದಾರೆ. ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ.

643 ಸಚಿವರ ಪೈಕಿ 302 ಮಂದಿ (ಶೇ 47) ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. 174 ಸಚಿವರ ವಿರುದ್ಧ (ಶೇ 27) ಗಂಭೀರ ಅಪರಾಧ ಪ್ರಕರಣಗಳಿವೆ. ಈ ಸಚಿವರು ಕೊಲೆ, ಕೊಲೆಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (ಶೇ 40) ಮಂದಿ ವಿರುದ್ಧ ಪ್ರಕರಣಗಳಿವೆ.

ಗಂಭೀರ ಕ್ರಿಮಿನಲ್ ಆರೋಪದಲ್ಲಿ 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ ಮೂರು ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದ ಬೆನ್ನಲ್ಲೇ ಈ ವರದಿ ಬಿಡುಗಡೆಯಾಗಿದೆ.
ಆಂಧ್ರ ಪ್ರದೇಶ, ತಮಿಳುನಾಡು, ಬಿಹಾರ, ಒಡಿಶಾ, ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ತೆಲಂಗಾಣ, ಹಿಮಾಚಲ ಪ್ರದೇಶ, ದೆಹಲಿ ಮತ್ತು ಪುದುಚೇರಿ ಸೇರಿದಂತೆ 11 ವಿಧಾನಸಭೆಯ ಶೇ. 60 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪವಿದೆ. ಇದಕ್ಕೆ ವಿರುದ್ಧವಾಗಿ ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ನಾಗಲ್ಯಾಂಡ್, ಉತ್ತರಾಖಂಡ್ ರಾಜ್ಯಗಳಲ್ಲಿ ಯಾವುದೇ ಸಚಿವರು ಕ್ರಿಮಿನಲ್ ಪ್ರಕರಣ ದಾಖಲಾಗಿಲ್ಲ.

30 ವಿಧಾನಸಭಾ ಕ್ಷೇತ್ರಗಳ ಪೈಕಿ 11ರಲ್ಲಿ ಕೋಟ್ಯಧೀಶರಿದ್ದಾರೆ. ಕರ್ನಾಟಕದಲ್ಲಿ 8 ಮಂದಿ ಬಿಲಿಯನೇರ್ ಸಚಿವರಿದ್ದಾರೆ. ನಂತರ ಆಂಧ್ರಪ್ರದೇಶದಲ್ಲಿ ಆರು, ಮಹಾರಾಷ್ಟ್ರದಲ್ಲಿ ನಾಲ್ಕು ಇಂತಹ ಸಚಿವರಿದ್ದಾರೆ.

ಲೋಕಸಭೆಯಲ್ಲಿ ಆಂಧ್ರಪ್ರದೇಶದ ಗುಂಟೂರಿನಿಂದ ಪ್ರತಿನಿಧಿಸುವ ಟಿಡಿಪಿಯ ಡಾ. ಚಂದ್ರಶೇಖರ್ ಪೆಮ್ಮಸಾನಿ ದೇಶದ ಅತ್ಯಂತ ಶ್ರೀಮಂತ ಸಚಿವರಾಗಿದ್ದಾರೆ. ಇವರು ಒಟ್ಟು ರೂ. 5,705 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ನಾಯಕ, ಡಿ ಕೆ ಶಿವಕುಮಾರ್ ಅವರು 1,413 ಕೋಟಿ ಗೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ರೂ. 931 ಕೋಟಿಗೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ.

ಟಾಪ್ 10 ರಲ್ಲಿರುವ ಇತರ ಶ್ರೀಮಂತ ಸಚಿವರೆಂದರೆ ಆಂಧ್ರಪ್ರದೇಶದ ನಾರಾಯಣ ಪೊಂಗೂರು ಮತ್ತು ನಾರಾ ಲೋಕೇಶ್, ತೆಲಂಗಾಣದ ಗದ್ದಂ ವಿವೇಕಾನಂದ ಮತ್ತು ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಕರ್ನಾಟಕದ ಸುರೇಶ್ ಬಿ ಎಸ್, ಮಹಾರಾಷ್ಟ್ರದ ಮಂಗಲ್ ಪ್ರಭಾತ್ ಲೋಧಾ, ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಇದ್ದಾರೆ.

TAGGED:DCM DK is the second richest minister in the country! Who is in the first place?
Share This Article
Facebook Twitter Copy Link Print
Previous Article ಫ್ಯಾಮಿಲಿ ಕೋರ್ಟ್‌ ಆವರಣದಲ್ಲಿ ಕಾಣಿಸಿಕೊಂಡ ಡಾರ್ಲಿಂಗ್‌ ಕೃಷ್ಣ – ಕಾರಣವೇನು?
Next Article Health Tips: ಈ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಲೇಬಾರದು!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?