newsics.com
ಕಳೆದ ಕೆಲವು ದಿನಗಳಿಂದ ರಾಜ್ಯ ದಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇದೀಗ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದ್ದು, ಭಾರೀ ಮಳೆಯಿಂದಾಗಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕಳೆದ 3-4 ದಿನಗಳಿಂದಲೂ ಗಿರಿ ಪ್ರದೇಶದಲ್ಲಿ ಭಾರೀ ಮಳೆ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದ ಸುಪ್ರಸಿದ್ದ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಹೋಗುವ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿದ್ದು, ಪ್ರವಾಸಿಗರ ಸುರಕ್ಷತೆ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಪ್ರವಾಸ ಮುಂದೂಡಲು ತಿಳಿಸಿದ್ದಾರೆ.