newsics.com
ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಿರೋಧಿಸಿ ಜನರಲ್-ಝಡ್ ಪ್ರತಿಭಟನಾಕಾರರು ಬೀದಿಗಿಳಿದು ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ ಹದಿನಾಲ್ಕು ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಸರ್ಕಾರದ ನಿರ್ಧಾರ ಖಂಡಿಸಿ ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ನೇಪಾಳದ ರಾಜಧಾನಿ ಕಠ್ಮಂಡುವಿಲ್ಲಿ ಸೈನ್ಯ ನಿಯೋಜಿಸಲಾಗಿದೆ.
ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದ್ದು, ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಪ್ರಯೋಗಿಸಿದ್ದಾರೆ.
ದಿ ಕಠ್ಮಂಡು ಪೋಸ್ಟ್ ವರದಿಯ ಪ್ರಕಾರ, ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ತೀವ್ರಗೊಳಿಸಿತು.
ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆಯಲ್ಲಿ ಕಠ್ಮಂಡು ಜಿಲ್ಲಾಡಳಿತ ಕಚೇರಿ ಕರ್ಫ್ಯೂವನ್ನು ವಿಸ್ತರಿಸಿತು.
ಮುಖ್ಯ ಜಿಲ್ಲಾ ಅಧಿಕಾರಿ ಛಬಿಲಾಲ್ ರಿಜಾಲ್ ಅವರ ಪ್ರಕಾರ, ಕರ್ಫ್ಯೂ ರಾತ್ರಿ 10:00 ರವರೆಗೆ (ಸ್ಥಳೀಯ ಸಮಯ) ಜಾರಿಯಲ್ಲಿರುತ್ತದೆ.
ನಾಳೆ ಇರ್ತೀನೋ ಇಲ್ವೊ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಇಂದಿಲ್ಲ! ಕೊಪ್ಪಳದಲ್ಲಿ ನಡೆದದ್ದೇನು?
Health news ಕ್ಯಾನ್ಸರ್ ರೋಗಿಗಳಲ್ಲಿ ಹೊಸ ಭರವಸೆ ಹುಟ್ಟಿಸಿದ ರಷ್ಯಾ ಲಸಿಕೆ: ಕ್ಲಿನಿಕಲ್ ಪ್ರಯೋಗದಲ್ಲೇ ಯಶಸ್ವಿ