newsics.com
ಬೆಳಗಾವಿ: ಬಿಡಿಸಿಸಿ ಬ್ಯಾಂಕ್ ಚುನಾವಣಾ ಕಣ ರಂಗೇರುತ್ತಿದ್ದು, ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿ, ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಂಘ ಹಾಗೂ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರಕ್ಕೆಂದು ಸಚಿವ ಸತೀಶ್ ಜಾರಕಿಹೊಳಿ ಅವರು ಮದಿಹಳ್ಳಿ ಗ್ರಾಮಕ್ಕೆ ತೆರಳಿದ್ದ ವೇಳೆ ಅಲ್ಲಿನ ಪಿಕೆಪಿಎಸ್ ಕಚೇರಿ ಎದುರು ಗಲಾಟೆ ನಡೆದಿದೆ. ಮದಿಹಳ್ಳಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿಗೆ ಪತ್ನಿ ಲಗಮವ್ವ ಕಾಳಮೋಕ್ಷ ಮಾಡಿದ್ದಾಳೆ.
ಸತೀಶ ಜಾರಕಿಹೊಳಿ ಅವರಿಗೆ ಬೆಂಬಲ ನೀಡಿದ್ದ ಗಂಡನಿಗೆ ರಸ್ತೆಯಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದಾಳೆ.
ಗಂಡ-ಹೆಂಡತಿ ಜಗಳ ಬಿಡಿಸಲು ಹೋದ ಸಚಿವ ಸತೀಶ್ ಜಾರಕಿಹೊಳಿ ಕೂಡ ಸುಸ್ತಾಗಿ ಹೋಗಿದ್ದಾರೆ.
ಪಿಕೆಪಿಎಸ್ ಒಳಗೆ ಸಚಿವ ಸತೀಶ ಜಾರಕಿಹೊಳಿ ತೆರಳಿದ ಬಳಿಕ ಮತ್ತೆ ಪತಿಯನ್ನು ಜಾರಕಿಹೊಳಿ ಸಹೋದರರು ಹೈಜಾಕ್ ಮಾಡಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ.
ಘಟನಾ ಸ್ಥಳಕ್ಕೆ ಮಾಜಿ ಸಂಸದ ರಮೇಶ ಕತ್ತಿ ಕೂಡ ಬಂದಿದ್ದರಿಂದ ಎರಡು ಗುಂಪುಗಳ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ತಲುಪಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೂಡ ಹರಸಾಹಸಪಟ್ಟರು. ಗಲಾಟೆ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆಯ ಮತ ನಾಮನಿರ್ದೇಶನ ಮಾಡುವ ನಿರ್ದೇಶಕರ ಸಭೆ ಮುಂದೂಡಲಾಯಿತು.
Be careful before kissing ಮುತ್ತು ಕೊಡುವ ಮುನ್ನ ಇರಲಿ ಎಚ್ಚರ! ಏನ್ಮಾಡಬೇಕು?