newsics.com
ಮದ್ದೂರು : ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಇಂದು ಸಾಮೂಹಿಕ ಗಣಪತಿ ವಿಸರ್ಜನೆಗೆ ಬೃಹತ್ ಮೆರವಣಿಗೆ ಆಯೋಜನೆಗೊಂಡಿದೆ.
ಹಿಂದೂ ಪರ ಸಂಘಟನೆಗಳು, ಬಿಜೆಪಿ, ಮತ್ತು ಜೆಡಿಎಸ್ ನೇತೃತ್ವದಲ್ಲಿ ನಡೆಯಲಿರುವ ಈ ಮೆರವಣಿಗೆಯಲ್ಲಿ 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುವುದು.
ಮದ್ದೂರಿನಲ್ಲಿ ಯಾವುದೇ ಅಹಿತಕರ ಘಟನೆ ತಡೆಗಟ್ಟಲು ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ 5 ಎಸ್ಪಿಗಳು, 4 ಎಎಸ್ಪಿಗಳು ಸೇರಿದಂತೆ 2,000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕೆಎಸ್‌ಆರ್‌ಪಿ, ಡಿಎಆರ್, ರ್ಯಾಪಿಡ್ ಆಕ್ಷನ್ ಫೋರ್ಸ್ ತುಕಡಿಗಳು ಸೇರಿವೆ. ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಮತ್ತು ಹಾಸನ ಜಿಲ್ಲೆಗಳಿಂದ ಪೊಲೀಸರನ್ನು ಕರೆತರಲಾಗಿದೆ. ಸೋಮವಾರದ ಘಟನೆ ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ.