newsics.com
ಕನ್ನಡದ ಸೂಪರ್ಹಿಟ್ ಸಿನಿಮಾ ಸು ಫ್ರಮ್ ಸೋ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ಥಿಯೇಟರ್ನಲ್ಲಿ ರಿಲೀಸ್ ಆಯಿತು. ಸುಮಾರು 46 ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರದಲ್ಲಿ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಸಿನಿಮಾ ಒಂದೇ ದಿನ 6 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಉದಾಹರಣೆ ಇದೆ. ಈಗ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದರೆ, ಆದರೂ ಜನ ಚಿತ್ರಮಂದಿರಕ್ಕೆ ಬರೋದನ್ನು ನಿಲ್ಲಿಸುತ್ತಿಲ್ಲ. ಇದು ಚಿತ್ರದ ಮೆಚ್ಚುಗೆ ಮತ್ತು ಅತ್ಯುತ್ತಮ ಕಥಾವಸ್ತು ಹೇಗೆ ವೀಕ್ಷಕರನ್ನು ತನ್ನತ್ತ ಸೆಳೆಯುತ್ತದೆ ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿದೆ.
ಸು ಫ್ರಮ್ ಸೋ’ ಸಿನಿಮಾ ಸೆಪ್ಟೆಂಬರ್ 9ರಂದು 5 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟಿಟಿಗೆ ಬಂದ ಹೊರತಾಗಿಯೂ ಥಿಯೇಟರ್ನಲ್ಲಿ ಸಾಕಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಅನೇಕರಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟ ವಿಚಾರ ತಿಳಿದಿಲ್ಲದೇ ಇರಬಹುದು. ಹೀಗಾಗಿ, ದುಡ್ಡು ಕೊಟ್ಟು ಥಿಯೇಟರ್ನಲ್ಲಿ ಸಿನಿಮಾ ವೀಕ್ಷಿಸುತ್ತಿದ್ದಾರೆ.
‘ಜೆಪಿ ತುಮಿನಾಡ್ ನಟಿಸಿ, ನಿರ್ದೇಶಿಸಿರೋ ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲ್ಮ್ಸ್ ಬ್ಯಾನರ್ ಅಡಿ ರಾಜ್ ಬಿ ಶೆಟ್ಟಿ, ಶಶಿಧರ್ ಶೆಟ್ಟಿ ಬರೋಡಾ, ರವಿ ರೈ ಕಳಸ ಸೇರಿ ನಿರ್ಮಾಣ ಮಾಡಿದ್ದಾರೆ. ಶನೀಲ್ ಗೌತಮ್, ಸಂಧ್ಯಾ ಅರಕೆರೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಾಜೆ, ಮೈಮ್ ರಾಮ್ದಾಸ್ ತಾರಾಬಳಗದಲ್ಲಿದ್ದಾರೆ. ರಾಜ್ ಬಿ ಶೆಟ್ಟಿ ಬಂಡವಾಳ ಹೂಡೋ ಜೊತೆಗೆ ಅತಿಥಿ ಪಾತ್ರ ನಿರ್ವಹಿಸಿದ್ದಾರೆ.
ಇತ್ತೀಚೆಗೆ ಗ್ಲೋಬಲ್ ಬಾಕ್ಸ್ ಆಫೀಸ್ ವಿಚಾರದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾಗಳ ಲಿಸ್ಟ್ಗೆ ರಾಜ್ ಶೆಟ್ರ ಸಿನಿಮಾವೂ ಸೇರಿದೆ. ಕೆಜಿಎಫ್ ಚಾಪ್ಟರ್ 2, ಕಾಂತಾರ, ಕೆಜಿಎಫ್ ಚಾಪ್ಟರ್ 1, 777 ಚಾರ್ಲಿ, ವಿಕ್ರಾಂತ್ ರೋಣ ಲಿಸ್ಟ್ಗೆ ಸು ಫ್ರಮ್ ಸೋ ಸಿನಿಮಾವೂ ಸೇರಿದೆ. ಇದಲ್ಲದೇ, ಕಡಿಮೆ ಬಜೆಟ್ನಲ್ಲಿ ನಿರ್ಮಾಣಗೊಂಡು ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡಿದ ಕೆಲವೇ ಸಿನಿಮಾಗಳ ಪಟ್ಟಿಯಲ್ಲೂ ಸು ಫ್ರಮ್ ಸೋ ಸ್ಥಾನ ಪಡೆದುಕೊಂಡಿದೆ.