Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು
ಪ್ರಮುಖಮನರಂಜನೆ

ನಟ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

Share
2 Min Read
SHARE

newsics.com

ನಟ, ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬಾಲಕೃಷ್ಣ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದ್ದು, ಬಾಲಯ್ಯ ಅವರ ಆರೋಗ್ಯದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡುತ್ತಿದ್ದಾರೆ.

ಆಂಧ್ರ ಪ್ರದೇಶ ಸರ್ಕಾರದ ಸ್ಟಾರ್ ಶಾಸಕ ಆಗಿರುವ ಬಾಲಯ್ಯ ಅವರು ಟಾಲಿವುಡ್ನ ಸೂಪರ್ ಸ್ಟಾರ್ಗಳಲ್ಲಿ ಸಹ ಒಬ್ಬರಾಗಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಸಚಿವ ಪಯ್ಯವುಲ ಕೇಶವ ಅವರು, ‘ಬಾಲಕೃಷ್ಣ ಅವರಿಗೆ ಆರೋಗ್ಯ ಹದಗೆಟ್ಟಿದೆ ಹಾಗಾಗಿ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ’ ಎಂದಿದ್ದಾರೆ. ಆದರೆ ಬಾಲಯ್ಯ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿಲ್ಲ.

ನಂದಮೂರಿ ಬಾಲಕೃಷ್ಣ ಅವರು ಕರ್ನಾಟಕಕ್ಕೆ ಹೊಂದಿಕೊಂಡಿರುವ ಆಂಧ್ರ ಪ್ರದೇಶದ ಹಿಂದೂಪುರ ಕ್ಷೇತ್ರದ ಶಾಸಕರಾಗಿದ್ದಾರೆ. ತೆಲುಗಿನ ಸ್ಟಾರ್ ನಟರಾಗಿರುವ ಅವರು ನಟಿಸಿದ ಕಳೆದ ನಾಲ್ಕು ಸಿನಿಮಾಗಳು ಸಹ ಸೂಪರ್ ಹಿಟ್ ಆಗಿವೆ. ಇದೀಗ ‘ಅಖಂಡ 2’ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾ ಚಿತ್ರೀಕರಣ ಕ್ಲೈಮ್ಯಾಕ್ಸ್ ಹಂತದಲ್ಲಿದೆ. ಇಂಥಹಾ ಸಮಯದಲ್ಲಿ ಬಾಲಯ್ಯ ಅವರಿಗೆ ಅನಾರೋಗ್ಯ ಉಂಟಾಗಿರುವುದು ಸಹಜವಾಗಿಯೇ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಬಾಲಕೃಷ್ಣ ಅವರು ತೆರೆಯ ಮೇಲೆ ಮತ್ತು ಸಾರ್ವಜನಿಕ ಜೀವನದಲ್ಲಿ ಸಾಕಷ್ಟು ಎನರ್ಜಿ ಇರುವ ವ್ಯಕ್ತಿ. ಇತ್ತೀಚೆಗಷ್ಟೆ ಸರ್ಕಾರಿ ಕಾರ್ಯಕ್ರಮವೊಂದರ ವೇಳೆ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರಿದ್ದ ಬಸ್ಸು ಓಡಿಸಿ ಗಮನ ಸೆಳೆದಿದ್ದರು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಹ ಸಿನಿಮಾ ರೀತಿಯಾಗಿಯೇ ಸ್ಟೈಲ್ ಮಾಡುವುದು, ಡೈಲಾಗ್ ಹೊಡೆಯುವುದು ಮಾಡುತ್ತಿರುತ್ತಾರೆ ಪ್ರೇಕ್ಷಕರನ್ನು ರಂಜಿಸುತ್ತಲೇ ಇರುತ್ತಾರೆ. ಇಷ್ಟು ಸಕ್ರಿಯವಾಗಿದ್ದ ವ್ಯಕ್ತಿಗೆ ಈಗ ಹಠಾತ್ತನೆ ಅನಾರೋಗ್ಯಕ್ಕೆ ಈಡಾಗಿರುವುದು ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.

ಬಾಲಯ್ಯ ಗೈರಾಗಿದ್ದ ‘ಸೂಪರ್ ಸಿಕ್ಸ್’ ಕಾರ್ಯಕ್ರಮಕ್ಕೆ ಅವರ ಅಳಿಯ, ಸಿಎಂ ಪುತ್ರನೂ ಆಗಿರುವ ನಾರಾ ಲೋಕೇಶ್ ಸಹ ಗೈರಾಗಿದ್ದರು. ಬಾಲಯ್ಯ ಅನಾರೋಗ್ಯದ ಕಾರಣಕ್ಕೆ ನಾರಾ ಲೋಕೇಶ್ ಗೈರಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ಸಚಿವ ಪಯ್ಯವುಲ ಕೇಶವ ಹೇಳಿರುವಂತೆ ನೇಪಾಳದ ವಿಷಮ ಸ್ಥಿತಿಯನ್ನು ಗಮನಿಸುತ್ತಿರುವ ನಾರಾ ಲೋಕೇಶ್, ಅಲ್ಲಿ ಸಿಲುಕಿರುವ ತೆಲುಗು ಜನರ ರಕ್ಷಣೆ ಪ್ರಯತ್ನದಲ್ಲಿರುವ ಕಾರಣ ಕಾರ್ಯಕ್ರಮಕ್ಕೆ ಬರಲಿಲ್ಲ ಎಂದಿದ್ದಾರೆ.

ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾ*ಚಾರ!

TAGGED:Actor Nandamuri Balakrishna falls ill: admitted to hospital
Share This Article
Facebook Twitter Copy Link Print
Previous Article ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾ*ಚಾರ!
Next Article ನೀರಿಗಾಗಿ ಜಗಳ: ಬೊಲೆರೊ ವಾಹನ ಹತ್ತಿಸಿ ವ್ಯಕ್ತಿಯ ಭೀಕರ ಕೊ*ಲೆ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?