newsics.com
ಕಾನ್ಪುರ(ಉತ್ತರ ಪ್ರದೇಶ): ಕಾನ್ಪುರದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು 6 ವರ್ಷದ ಮುಗ್ಧ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಆಕೆಗೆ 5 ರೂಪಾಯಿ ಆಮಿಷವೊಡ್ಡಿ ತಮ್ಮೊಂದಿಗೆ ಕರೆದುಕೊಂಡು ಹೋಗಿ ಮುಚ್ಚಿದ ಕೋಣೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಹುಡುಗಿ ಕಿರುಚಿದಾಗ, ಸ್ಥಳಕ್ಕೆ ಬಂದ ಜನರು ಅಲ್ಲಿನ ದೃಶ್ಯ ನೋಡಿ ದಿಗ್ಭ್ರಮೆಗೊಂಡರು. ಅವರು ಬಾಲಕಿಯನ್ನು ಆರೋಪಿಗಳಿಂದ ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದರು. ಬಾಲಕಿಯನ್ನು ಚಿಕಿತ್ಸೆಗಾಗಿ ಕಾಶಿರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಜ್ಮೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದ ಕಾನ್ಪುರದ ಜಜ್ಮೌ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ 6 ವರ್ಷದ ಬಾಲಕಿಯೊಬ್ಬಳು ಮನೆಯ ಹೊರಗೆ ಆಟವಾಡುತ್ತಿದ್ದಳು. 8 ಮತ್ತು 13 ವರ್ಷದ ಇಬ್ಬರು ಮಕ್ಕಳು ಮುಗ್ಧ ಬಾಲಕಿಗೆ ಚಾಕೊಲೇಟ್ ಆಮಿಷವೊಡ್ಡಿ ತಮ್ಮೊಂದಿಗೆ ಕರೆದುಕೊಂಡು ಹೋಗಿ ಬಾಯಿ ಮುಚ್ಚಿ ಕೋಣೆಗೆ ಎಳೆದೊಯ್ದರು. ಇಬ್ಬರೂ ಆ ಕೋಣೆಯಲ್ಲಿಯೇ ಅಮಾಯಕ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದ ಟ್ರೇಲರ್ ರಿಲೀಸ್ ಗೆ ಡೇಟ್ ಫಿಕ್ಸ್
ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು