newsics.com
ಮಂಡ್ಯ : ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಯತ್ನಾಳ್ ವಿರುದ್ಧವೂ FIR ದಾಖಲಾಗಿದೆ.
ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.
ರಾಜ್ಯ ಬಿಜೆಪಿ ಹೊಂದಾಣಿಕೆ ರಾಜಕಾರಣವನ್ನು ಕೈಬಿಡಬೇಕು. ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಬಿಜೆಪಿಯವರು ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಈ ಬಗ್ಗೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ನಾನೇ ಒಂದು ಹೊಸ ಪಕ್ಷವನ್ನು ಕಟ್ಟುತ್ತೇನೆ ಎಂದರು.ನಾವು ಹಾಗೂ ಪ್ರತಾಪ್ ಸಿಂಹ ಸೇರಿ ಹೊಸ ಹಿಂದೂ ಪಕ್ಷವನ್ನು ಕಟ್ಟುತ್ತೇವೆ. ಬಿಜೆಪಿಯವರುರು ನನ್ನನ್ನು ಗೌರವದಿಂದ ವಾಪಸ್ ಕರೆಸಿಕೊಳ್ಳಲಿ. ಇಲ್ಲವಾದಲ್ಲಿ ಹೊಸ ಹಿಂದೂ ಪಕ್ಷ ಕಟ್ಟುತ್ತೇವೆ ಎಂದು ಹೇಳಿದರು.