newsics.com
ಹಾಸನ: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆಯಬಾರದ ಘನಘೋರ ದುರಂತ ನಡೆದು ಹೋಗಿದೆ. ಟ್ರಕ್ 9 ಜನರನ್ನ ಬಲಿ ಪಡೆದಿದೆ.ದುರಂತಕ್ಕೆ ಬೈಕ್ ಸವಾರ ಬೇಕಾಬಿಟ್ಟಿ ಅಡ್ಡ ಬಂದಿದ್ದು ಹಾಗೂ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.