ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಬೆಂಕಿ : ತಪ್ಪಿದ ದುರಂತ

newsics.com ಬೆಂಗಳೂರು :  ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಬೆಂಕಿ ತಗುಲಿದ್ದು, ಭಾರಿ ದುರಂತವೊಂದು ತಪ್ಪಿದೆ .ಹೆಚ್ ಎ ಎಲ್ ಏರ್ ಪೋರ್ಟ್ ನ ಮುಖ್ಯ ಗೇಟ್ ಬಳಿ ಈ ಘಟನೆ ನಡೆದಿದೆ. 75 ಪ್ರಯಾಣಿಕರಿದ್ದ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ನಿರ್ವಾಹಕರು ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ. ಇಂಜಿನ್’ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್’ ಗೆ ಹರಡಿದೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ.