ಬುರುಡೆ ಚಿನ್ನಯ್ಯನಿಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ

newsics.com ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ದಫನ ಪ್ರಕರಣಕ್ಕೆ ಸಂಬಂಧಿಸಿದಂತೆಬುರುಡೆ ಚಿನ್ನಯ್ಯನಿಗೆ ಜೈಲುವಾಸವೇ ಗತಿಯಾಗಿದೆ. ಶಿವಮೊಗ್ಗ ಜೈಲು ಸೇರಿರುವ ಬುರುಡೆ ಚಿನ್ನಯ್ಯ, ಜಾಮೀನಿಗಾಗಿ ಕೋರಿ ಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಜೆ ಎಂಎಫ್ ಸಿ ಕೋರ್ಟ್, ಚಿನ್ನಯ್ಯ ಜಾಮೀನು ಅರ್ಜಿ ವಜಾಗೊಳಿಸಿದೆ.   ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಚಿನ್ನಯ್ಯ ಜಾಮೀನಿಗೆ ಎಸ್ ಐಟಿ ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ.