newsics.com
ಬೆಂಗಳೂರು: ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸೆಪ್ಟೆಂಬರ್ 16, 17ರಂದು ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಸೆ. 18ರಂದು ಕರಾವಳಿ ಜಿಲ್ಲೆಗಳು, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.