newsics.com
ರಾಜ್ಯದಲ್ಲಿ ಮಳೆ ಮತ್ತೆ ಶುರುವಾಗಿದೆ, ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಎರಡು ದಿನಗಳ ಅವಧಿಗೆ ಹಳದಿ ಎಚ್ಚರಿಕೆ ನೀಡಿದೆ. ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಸಹ ನೀಡಲಾಗಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ,ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ , ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.