newsics.com
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದು ಬಯಲಾಗಿದೆ.
ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್ (42) ಬಂಧಿತ ಆರೋಪಿ. ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್ಗೆ ಹೋಗಿದ್ದ ಸಮದ್, ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿ ಲಾಡ್ಜ್ನಲ್ಲಿ ರೂಮ್ ಪಡೆದಿದ್ದರು. ಆದರೆ, ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದಿದ್ದು, ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಗೊತ್ತಾಗಿದೆ. ಅಬ್ದುಲ್ ಸಮದ್ ತನ್ನ ಅಸಲಿ ಹೆಸರನ್ನು ಬದಲಿಸಿ ‘ರಮೇಶ್’ ಎಂಬ ಹೆಸರಿನಲ್ಲಿ ಆಧಾರ್ ಕಾರ್ಡ್ ಎಡಿಟ್ ಮಾಡಿಸಿಕೊಂಡಿದ್ದನು.
ಸ್ಥಳಕ್ಕೆ ಬಂದ ಶೃಂಗೇರಿ ಪೊಲೀಸರು, ಅಬ್ದುಲ್ ಸಮದ್ ಮತ್ತು ಆತನ ಜತೆಗಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅಬ್ದುಲ್ ಸಮದ್ ಬೇರೆ ಕೋಮಿನ ವ್ಯಕ್ತಿಯಾಗಿದ್ದು, ಮಹಿಳೆ ಜತೆ ಸಂಬಂಧ ಬೆಳೆಸಲು ಹಿಂದೂ ಹೆಸರಿನಲ್ಲಿ ಗುರುತಿನ ಚೀಟಿ ನಕಲಿ ಮಾಡಿಸಿಕೊಂಡಿದ್ದುದು ದೃಢಪಟ್ಟಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?
3 ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್
Dharmasthala Case: ಬಂಗ್ಲೆಗುಡ್ಡ ರಹಸ್ಯ; ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್ ನಲ್ಲಿರುವ ವ್ಯಕ್ತಿಯ ಗುರುತು ಪತ್ತೆ