newsics.com
ಬೆಂಗಳೂರು: ಬೆಂಗಳೂರು, ಧಾರವಾಡ, ಬಾಗಲಕೋಟೆ, ಯಾದಗಿರಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಮತ್ತೆ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರು ನಗರದಾದ್ಯಂತ ಗುರುವಾರ ರಾತ್ರಿ ಭಾರಿ ಮಳೆ ಸುರಿದಿದ್ದು 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ವಾರಾಂತ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ,ವಿಜಯಪುರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.