newsics.com
ಚೆನ್ನೈ: ನಟ, ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ಮನೆಗೆ ಅಪರಿಚಿತ ಯುವಕನೊಬ್ಬ ನುಗ್ಗಿ ಸಂಚಲನ ಮೂಡಿಸಿರುವ ಘಟನೆ ಬೆಳಕಿಗೆ ಬಂದಿದ್ದು ಇದರ ಬೆನ್ನಲ್ಲೇ ಭದ್ರತಾ ಲೋಪದ ಕುರಿತು ಪ್ರಶ್ನೆಗಳು ಮೂಡಿವೆ.
ಚೆನ್ನೈ ನ ನೀಲಂಕರೈ ನಿವಾಸದಲ್ಲಿ ಈ ಘಟನೆ ನಡೆದಿದ್ದು ಅಪರಿಚಿತ ಯುವಕ ಮನೆಯ ಟೆರೇಸ್ ಮೇಲೆ ಕುಳಿತಿರುವುದು ಭದ್ರತಾ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ ಈ ಕೂಡಲೇ ಎಚ್ಚೆತ್ತ ಸಿಬ್ಬಂದಿಗಳು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪೊಲೀಸರು ಹೇಳಿದ್ದೇನು?
ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ನಟ ವಿಜಯ್ ಅವರ ಮನೆಗೆ ನುಗ್ಗಿದ ಯುವಕನನ್ನು ಅರುಣ್ (೨೪) ಎಂದು ಗುರುತಿಸಲಾಗಿದೆ ಆತ ಮಾನಸಿಕ ಅಸ್ವಸ್ಥನಾಗಿದ್ದು ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಅಲ್ಲದೆ ಆತ ನಟ ವಿಜಯ್ ಅವರ ಅಪ್ಪಟ ಅಭಿಮಾನಿಯಾಗಿದ್ದಾನೆ ಎಂದು ಹೇಳಿಕೊಂಡಿದ್ದ ಹಾಗಾಗಿ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ಬಂದಿರುವುದಾಗಿ ಹೇಳಿಕೊಂಡಿದ್ದಾನೆ ಆದರೆ ಮನೆಯೊಳಗೆ ಹೇಗೆ ಬಂದ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಭದ್ರತಾ ಲೋಪ:
ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವ ವಿಜಯ್ ಅವರಿಗೆ ಕೇಂದ್ರ ಗೃಹ ಸಚಿವಾಲಯದಿಂದ ವೈ-ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ ಆದರೂ ಭದ್ರತಾ ವ್ಯವಸ್ಥೆಗಳನ್ನು ಮೀರಿ ಅರುಣ್ ಹೇಗೆ ಮನೆಯೊಳಗೆ ಪ್ರವೇಶಿಸಿದ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ರಾಜಕೀಯ ಪ್ರವಾಸ:
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ತಯಾರಿ ನಡೆಸುತ್ತಿರುವ ವಿಜಯ್ ಈಗಾಗಲೇ ಹಲವೆಡೆ ಪ್ರವಾಸ ಕೈಗೊಂಡು ಪಕ್ಷದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ ಜೊತೆಗೆ ಮುಂಬರುವ ಚುನಾವಣೆಗೂ ಸಿದ್ಧತೆ ನಡೆಸುತ್ತಿದ್ದಾರೆ ಈ ನಡುವೆ ಅಪರಿಚಿತ ಯುವಕ ಮನೆಯೊಳಗೆ ಪ್ರವೇಶಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.