newsics.com
ಬೆಂಗಳೂರು:ಮೆಟ್ರೋ, ಬಸ್, ಹಾಲು, ನೀರು, ವಿದ್ಯುತ್ ಹೀಗೆ ಹಲವಾರು ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯಲ್ಲೂ ದೇವಾಲಯಗಳ ಸೇವಾ ದರ ಹೆಚ್ಚಳ ಮಾಡಿ, ಮತ್ತಷ್ಟು ಹೊರೆ ಹೆಚ್ಚಿಸಿದೆ. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾ ಶುಲ್ಕವನ್ನು ಸದ್ದಿಲ್ಲದೆ ಏರಿಕೆ ಮಾಡಲಾಗಿದೆ.
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ 14 ದೇವಸ್ಥಾನಗಳ ಸೇವಾ ಶುಲ್ಕ ಏರಿಕೆ ಮಾಡಲಾಗಿದ್ದು, ಅಕ್ಟೋಬರ್ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ ಐದು ವರ್ಷಗಳಿಂದ ಸೇವಾ ಶುಲ್ಕ ಪರಿಷ್ಕರಣೆ ಮಾಡದ ಹಾಗೂ ಯಾವ ದೇವಾಲಯಗಳು ಸೇವಾ ಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾ ಶುಲ್ಕವನ್ನು ಆಗಮ ಪಂಡಿತರ ಪರಿಶೀಲನೆ ನಂತರ ಶೇ. 5-10ರವರೆಗೆ ಮತ್ತು ಕೆಲವು ದೇವಾಲಯಗಳಿಗೆ ಶೇ. 15ರವರೆಗೆ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾ ಶುಲ್ಕ ಏರಿಕೆ ಮಾಡಲಾಗಿದೆ.
ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
ಬೆಂಗಳೂರು ನಗರ ಮಲ್ಲೇಶ್ವರದ ಶ್ರೀ ಯೋಗ ನರಸಿಂಹಸ್ವಾಮಿ ದೇವಾಲಯ, ಶ್ರೀ ನಂದಿತೀರ್ಥ ಸ್ವಾಮಿ ದೇವಾಲಯ, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥ ನಾರಾಯಣಸ್ವಾಮಿ ದೇವಾಲಯ, ಜಿಲ್ಲೆಯ ತಲಕಾಯಲಬೆಟ್ಟದ ಶ್ರೀ ಭೂ ನೀಳ ಸಮೇತ ವೆಂಕಟರಮಣ ಸ್ವಾಮಿ ದೇವಾಲಯ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯ, ಸೌತಡ್ಕದ ಮಹಾಗಣಪತಿ ದೇವಾಲಯ, ಮರೋಳಿಯ ಸೂರ್ಯನಾರಾಯಣ ಸ್ವಾಮಿ ದೇವಾಲಯ