newsics.com
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ನೀಡಿದ್ದು, ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ.
ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ 2300ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ
• ದಸರಾ ಹಬ್ಬದ ರಜೆಗಳ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 26/09/2025, 27/09/2025 ಹಾಗೂ 30/09/2025 ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
• ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೆöÊ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.
School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ