newsics.com
ತುಮಕೂರು: ಇಬ್ಬರು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ನಡೆದಿದೆ.
23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾವೂ ಸಾವನ್ನಪ್ಪಿದ್ದಾರೆ.
ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ. ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ.