Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ನವದೆಹಲಿ: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.ಜಿಎಸ್ಟಿ ಕಡಿತಗೊಳಿಸಿ ಜಾರಿ ಹಿಂದಿನ ದಿನ ಮೋದಿ ದೇಶವನ್ನು ಉದ್ದೇಶಿಸಿ ಮಾತನ್ನಾಡುತ್ತಿರೋದು ಭಾರೀ ಕುತೂಹಲ ಮೂಡಿಸಿದೆ.
ಆದರೆ ಮೋದಿ ಅವರು ತಮ್ಮ ಭಾಷಣದಲ್ಲಿ ಯಾವ ವಿಚಾರವನ್ನು ಪ್ರಸ್ತಾಪ ಮಾಡಲಿದ್ದಾರೆ ಅನ್ನೋದ್ರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾಕೆಂದರೆ ನಾಳೆಯಿಂದ ನಾಡ ಹಬ್ಬ ದಸರಾ ಕೂಡ ಆರಂಭವಾಗ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ದೀಪಾವಳಿ ಕೂಡ ಬರಲಿದೆ. ಮೋದಿ ಅವರ ಭಾಷಣೆ ಮೇಲೆ ದೇಶದ ಜನ ಗುಡ್ನ್ಯೂಸ್ ನಿರೀಕ್ಷೆಯಲ್ಲಿದ್ದಾರೆ.
ಇನ್ನು ಇವತ್ತು ಮಹಾಲಯ ಅಮಾಸ್ಯೆ ನಿಮಿತ್ತ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.