Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬಾಗಲಕೋಟೆ : ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಉಚ್ಚಾಟನೆ ಮಾಡಿದ ಬಳಿಕ, ಪಂಚಮಸಾಲಿ ಪೀಠದ ಬಳಿ ಸದ್ಯ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಗ್ರಾಮದಲ್ಲಿ 1 DAR,ತುಕಡಿ, 20ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಇದೀಗ ಟ್ರಸ್ಟ್ ಸಿಬ್ಬಂದಿಗಳು ಬೀಗ ಹಾಕಿದ್ದಾರೆ. ಸದ್ಯ ಪಂಚಮಸಾಲಿ ಪೀಠದ ಆವರಣ ಜನರಿಲ್ಲದೆ ಬೀಕೋ ಎನ್ನುತ್ತಿದೆ.ಪೀಠದ ಕಡೆಗೆ ಯಾರೂ ಹೋಗದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.
ಬಸವ ಜಯ ಮೃತ್ಯುಂಜಯ ಶ್ರೀಗಳು ಕೂಡಲಸಂಗಮಕ್ಕೆ ಬರುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಲಾದಾಗಿದೆ. ಕೂಡಲಸಂಗಮದಲ್ಲಿ ಭಕ್ತರ ಜೊತೆಗೆ ಸ್ವಾಮೀಜಿ ಚರ್ಚಿಸುವ ಸಾಧ್ಯತೆ ಇದೆ.