Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಹವಾಮಾನವು ಸಾಮಾನ್ಯವಾಗಿ ಮೋಡ ಕವಿದಿದ್ದು, ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ.